Latestಚುನಾವಣೆ-Electionರಾಷ್ಟ್ರೀಯ-National

ಇಡಿ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಅರ್ಜಿ; ವಿಚಾರಣೆ ಸೋಮವಾರ

ನವದೆಹಲಿ: ಇಡಿ ಬಂಧನ ಪ್ರಶ್ನಿಸಿ ಮುಖುಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.

ಈ ಮೊದಲು ತಮ್ಮ ಬಂಧನವನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರವಿಂದ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ನ್ಯಾ.ಸ್ವರಣಾ ಕಾಂತ ಶರ್ಮಾ, ಇಡಿ ಬಂಧನ ಕಾನೂನು ಬದ್ದವಾಗಿದೆ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾ ಮಾಡಿದ್ದರು. ಇದನ್ನೂ ಓದಿ:  70ft ಆಳದ ಬಾವಿಗೆ ಬಿದ್ದ ಬಾಲಕನ ಚಲನವಲನ ಸಿಸಿಟಿವಿಯಲ್ಲಿ ಸೆರೆ

https://youtu.be/MUDGOl7ETaI?si=8pTUAJmaX8-EHx2f

ಇದಾದ ಒಂದು ದಿನದ ನಂತರ ಕೇಜ್ರಿವಾಲ್ ಅವರು ಬುಧವಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅಲ್ಲದೆ ತಮ್ಮ ಮೇಲ್ಮನವಿಯನ್ನು ಆದಷ್ಟು ಬೇಗ ವಿಚಾರಣೆಗೆ ಪಟ್ಟಿ ಮಾಡುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು. ಇದನ್ನೂ ಓದಿ:  ರಾಮೇಶ್ವರಂ ಕೆಫೆ ಬಾಂಬ್‌ಬ್ಲಾಸ್ಟ ಪ್ರಕರಣ – ಎನ್‌ಐಡಿ ಕಸ್ಟಡಿಗೆ ಶಂಕಿತರನ್ನ ಒಪ್ಪಿಸಿದ ಕೋರ್ಟ್

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಮಾರ್ಚ್ 21 ರ ರಾತ್ರಿ ಕೇಜ್ರಿವಾಲ್ ಅವರನ್ನು ಬಂಧಿಸಿದ್ದರು. ಮಾರ್ಚ್ 22 ರಂದು ವಿಚಾರಣಾ ನ್ಯಾಯಾಲಯವು ಅವರನ್ನು ಆರು ದಿನಗಳ ಇಡಿ ಕಸ್ಟಡಿಗೆ ನೀಡಿತು. ಅದನ್ನು ಇನ್ನೂ ನಾಲ್ಕು ದಿನಗಳವರೆಗೆ ವಿಸ್ತರಿಸಲಾಯಿತು. ಏಪ್ರಿಲ್ 1 ರಂದು ಅವರನ್ನು ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ಇದನ್ನೂ ಓದಿ: ಫ್ಲೈ ಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವು

https://youtu.be/-Sk1lSZYsqM?si=j3_JkK9auvcwCJlI
Share with Friends
author avatar
News Desk