Crime NewsLatestರಾಷ್ಟ್ರೀಯ-National

ಛತ್ತೀಸ್‌ಗಢದಲ್ಲಿ ಬಸ್ ಪಲ್ಟಿ – 12 ಮಂದಿ ದುರ್ಮರಣ

ರಾಯ್ಪುರ: ದುರ್ಗ್ ಜಿಲ್ಲೆಯ ಕುಮ್ಹಾರಿ ಪ್ರದೇಶದಲ್ಲಿ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 12 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 14 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಂಗಳವಾರ ರಾತ್ರಿ 8:30 ಕ್ಕೆ ಈ ಘಟನೆ ನಡೆದಿದ್ದು, ದುರ್ಗದಲ್ಲಿ ಕಾರ್ಮಿಕರೊಂದಿಗೆ ತುಂಬಿದ್ದ ಬಸ್ ಹಳ್ಳಕ್ಕೆ ಬಿದ್ದಿದ್ದರಿಂದ 12 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 14 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ದುರ್ಗದ ಜಿಲ್ಲಾಧಿಕಾರಿ ರಿಚಾ ಪ್ರಕಾಶ್ ಚೌಧರಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:ಮಧ್ಯಪ್ರದೇಶಧಲ್ಲಿ ಲೋಕಸಭಾ ಅಭ್ಯರ್ಥಿ ನಿಧನ ಹಿನ್ನೆಲೆ ಚುನಾವಣೆ ಮುಂದೂಡಿಕೆ

https://youtu.be/_Nk-Jm289Is?si=3g9N4Xq3GBMRYsb5

ಗಾಯಗೊಂಡವರಲ್ಲಿ ಹನ್ನೆರಡು ಜನರನ್ನು ಎಐಐಎಂಎಸ್ (ರಾಯಪುರ)ಗೆ ಕಳುಹಿಸಲಾಗಿದೆ. ಉಳಿದ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೆಲ್ಲರ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ. ನಾವು ಅವರಿಗೆ ಸಾಧ್ಯವಾದಷ್ಟು ಉತ್ತಮವಾದ ಆರೈಕೆಯನ್ನು ನೀಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೇಜ್ರೀವಾಲ್ ಸಲ್ಲಿಸಿದ್ದ ಅರ್ಜಿ ವಜಾ

https://youtu.be/iMxTkg_jFTY?si=4STJ7mifOspZQZWs

ಬಸ್ಸಿನೊಳಗೆ ಇನ್ನೂ ಸಿಲುಕಿರುವ ಪ್ರಯಾಣಿಕರನ್ನು ಹೊರತೆಗೆಯುವ ಪ್ರಕ್ರಿಯೆ ನಡೆಯುತ್ತಿದೆ. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಇದನ್ನೂ ಓದಿ:  ಅಂದು “ಕೈ” ವಿಶ್ವದಿಂದ ಸಹಾಯ ಕೇಳಿತ್ತು, ಈಗ ಭಾರತ ವಿಶ್ವಕ್ಕೆ ಸಹಾಯ ಮಾಡುತ್ತಿದೆ: ಮೋದಿ

Share with Friends
author avatar
News Desk