ರಾಮೇಶ್ವರಂ ಕೆಫೆ ಬಾಂಬರ್ ಆರೆಸ್ಟ್- ಕೋಡ್‌ವರ್ಡ್ ಸಹಾಯದಿಂದ ಬಾಂಬ್‌ಬ್ಲಾಸ್ಟ್
ಬೆಂಗಳೂರು: ಕೋಡ್‌ವರ್ಡ್ ಸಹಾಯದಿಂದ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ಆ ಮಾಡಿದ ಆರೋಪಿಗಳ ಬಂಧನ ಮಾಡಲಾಗಿದೆ.
ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಮುಸಾವೀರ್ ಹುಸೇನ್ ಮತ್ತು ಕೃತ್ಯಕ್ಕೆ ಸಹಕಾರ ನೀಡಿದ ಅಬ್ದುಲ್ ಮತೀನ್‌ನನ್ನು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೃತ್ಯ ಎಸಗಿದ್ದ ಮುಸಾವೀರ್ ಹುಸೇನ್ ಕೋಲ್ಕತ್ತಾದ ಪೂರ್ವ ಮಿಡ್ನಾಪುರ ದಿಘಾ ಮನೆಯಲ್ಲಿ ಅಡಗಿದ್ದನ್ನು. ಇದನ್ನೂ ಓದಿ: ದೆಹಲಿ ಮುಖ್ಯ ಕಾರ್ಯದರ್ಶಿ ವಿರುದ್ಧ ಎಫ್‌ಐಆರ್
ಮಾಝ್ ಮುನೀರ್ ಮೊದಲ ಆರೋಪಿ:
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲ್ಲಿನಲ್ಲಿದ್ದ ಮಾಝ್ ಮುನೀರ್‌ನನ್ನು ಎನ್‌ಐಎ ಅಧಿಕಾರಿಗಳು 7 ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಜೈಲಿನಲ್ಲಿ ರೇಡ್ ಮಾಡಿದ ಬಳಿಕ ಮಾಝ್ ಬ್ಯಾರಕ್‌ನಲ್ಲಿ ಕೆಲವೊಂದು ಪತ್ರಗಳು ಸಿಕ್ಕಿದ್ದವು. ಅವುಗಳು ಪ್ರಕರಣಕ್ಕೆ ಮಹತ್ವದ ತಿರುವು ನೀಡಿದ ಹಿನ್ನೆಲೆಯಲ್ಲಿ ಕೆಫೆ ಸ್ಫೋಟ ಪ್ರಕರಣದಲ್ಲಿ ಮಾಝ್ ಮುನೀರ್ ಸೂತ್ರಧಾರನಾಗಿದ್ದು ಆತನನ್ನೇ ಮೊದಲ ಆರೋಪಿಯನ್ನಾಗಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಭೀಕರ ಅಪಘಾತ – ಘಟನೆಯಲ್ಲಿ ಮೂವರು ಪೊಲೀಸರು ಸಾವು
ಎರಡು ಮತ್ತು ಮೂರನೇ ಆರೋಪಿಗಳನ್ನಾಗಿ ಮತೀನ್ ಮತ್ತು ಮುಸಾವೀರ್ ಹೆಸರನ್ನು ಉಲ್ಲೇಖಿಸಲಾಗಿದ್ದು, ಈಗ ಬಂಧನ ಆಗಿರುವ ಮುಜಾಮಿಲ್ ಷರೀಫ್ ನಾಲ್ಕನೇ ಆರೋಪಿಯನ್ನಾಗಿ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಇದನ್ನೂ ಓದಿ: ಮೋದಿ ಫೋಟೋ ಬಳಕೆ ವಿಚಾರ- ಬಿಜೆಪಿಯಿಂದ ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಅರೋಪಿಗಳ ಸೆರೆಯಾಗಿದ್ದು ಹೇಗೆ?
ಶಿವಮೊಗ್ಗ ತುಂಗಾ ನದಿ ತೀರದಲ್ಲಿ ಬಾಂಬ್ ಸ್ಟೋಟ ಪ್ರಕರನದಲ್ಲಿ ಈಗಾಗಲೇ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದ ಮಾಝ್ ಮುನೀರ್‌ನನ್ನು ಎನ್‌ಐಎ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡಸಿತ್ತು. ಮುನೀರ್ ಸೆಲ್ ಮೆಲೆ ದಾಳಿ ಮಡಿದಾಗ ಮೆಮೋರಿ ಕಾರ್ಡ್ ಪತ್ತೆಯಾಗಿತ್ತು. ಈ ಮೆಮೋರಿ ಕಾರ್ಡ್ ಪರಿಶೀಲಿಸಿದ್ದಾಗ ಹಲವು ಕೋಡ್ ವರ್ಡ್ ಡಿಕೋಡ್ ಮಾಡಿದಾಗ ಆರೋಪಿಗಳ ಮಾಹಿತಿ ಸಿಕಿತ್ತು ಎಂದು ಎನ್‌ಐಎ ಮೂಲಗಲೂ ತಿಳಿಸಿವೆ. ಇದನ್ನೂ ಓದಿ: ತಾಯಿಗಾಗಿ ದೇವಸ್ಥಾನ ಕಟ್ಟಿಸಿದ ದಳಪತಿ ವಿಜಯ್
ಈ ಖಚಿತ ಮಾಹಿತಿಯನ್ನು ಆಧಾರಿಸಿ ತನಿಖೆಗೆ ಇಳಿದಾಗ ಆರೋಪಿಗಳು ಪಶ್ಚಿಮ ಬಂಗಾಳದಲ್ಲೇ ತಲೆಮರೆಸಿಕೊಂಡಿದ್ದ ವಿಚಾರ ತಿಳಿದು ಬಂದಿತ್ತು. ತನಿಕೆಯನ್ನು ಮತ್ತಷ್ಟು ತೀವ್ರಗೊಳಿಸಿದ ಎನ್‌ಐಎ ಇಂದು ಪಶ್ಚಿಮ ಬಂಗಾಳದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಇಲ್ಲಿ ನಾವು ಅಚ್ಚರಿ ಪಡುವ ವಿಷಯವೆನೇಂದರೆ ಮುನೀರ್ ಜೈಲಿನಲ್ಲಿ ಕುಳಿತೇ ಕೋಡ್‌ವರ್ಡ್ ಬರೆದಿದ್ದ. ಇದನ್ನೂ ಓದಿ: ಮಚ್ಚಿನಿಂದ ಕೊಚ್ಚಿ ಪೊಲೀಸರಿಗೆ ಶರಣಾದ ಗಂಡ – ಮಾರಕಾಸ್ತ್ರ ನೋಡಿ ಬೆಚ್ಚಿಬಿದ್ದ ಸ್ಥಳೀಯರು
