Latestಚುನಾವಣೆ-Electionರಾಷ್ಟ್ರೀಯ-National

ಲೋಕ ಜನಶಕ್ತಿ ಪಕ್ಷದ 22 ನಾಯಕರು ರಾಜೀನಾಮೆ – ಇಂಡಿಯಾ ಒಕ್ಕೂಟಕ್ಕೆ ಬೆಂಬಲ

ಪಾಟ್ನಾ: ಲೋಕಸಭೆ ಚುನಾವಣೆಗೆ ಟಿಕೆಟ್ ಸಿಗದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ಚಿರಾಗ್ ಪಾಸ್ಟಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷದ 22 ನಾಯಕರು ಏಕಕಾಲದಲ್ಲಿ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜೀನಾಮೆ ನೀಡಿದ ಪ್ರಮುಖರಲ್ಲಿ ಮಾಜಿ ಸಚಿವ ರೇಣು ಕುಶ್ವಾಹ, ಮಾಜಿ ಶಾಸಕ ಮತ್ತು ಎಲ್‌ಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಸತೀಶ್ ಕುಮಾರ್, ರಾಜ್ಯ ಸಂಘಟನೆ ಸಚಿವ ರವೀಂದ್ರ ಸಿಂಗ್, ಅಜಯ್ ಕುಶ್ವಾಹ, ಸಂಜಯ್ ಸಿಂಗ್ ಮತ್ತು ರಾಜ್ಯ ಪ್ರಧಾನ ಕರ‍್ಯರ‍್ಶಿ ರಾಜೇಶ್ ಡಾಂಗಿ ಸೇರಿದ್ದಾರೆ. ಹಣಕ್ಕಾಗಿ ಟಿಕೆಟ್ ಹಂಚಿಕೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದನ್ನೂ ಓದಿ: ಟೈಲರಿಂಗ್ ಅಂಗಡಿಗೆ ಬೆಂಕಿ-ಒoದೇ ಕುಟುಂಬದ 7 ಮಂದಿ ಸಾವು

https://youtu.be/0Nyx7Oqxwo4?si=BS0FEwesiePRtApC

ಪಕ್ಷಕ್ಕೆ ರಾಜೀನಾಮೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಂಸದೆ ರೇಣು ಕುಶ್ವಾಹಾ, ಹೊರಗಿನವರಿಗೆ ಟಿಕೆಟ್ ಕೊಡುವ ಬದಲು ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ನೀಡಬೇಕು. ಹೊರಗಿನವರಿಗೆ ಟಿಕೆಟ್ ನೀಡಲಾಗಿದೆ ಎಂದರೆ ನಿಮ್ಮ ಪಕ್ಷದಲ್ಲಿ ನಾವ್ಯಾರು ಸಮರ್ಥರು ಇಲ್ವಾ? ನಾವು ಪಕ್ಷಕ್ಕಾಗಿ ಕಾರ್ಮಿಕರಾಗಿ ಸೇವೆ ಸಲ್ಲಿಸಲು ಬಂದಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ:ಕೋಲ್ಕತ್ತಾದಲ್ಲಿ ಮಹಿಳೆಯ ಭೀಕರ ಹತ್ಯೆ, 3 ಪ್ಲಾಸ್ಟಿಕ್ ಚೀಲಗಳಲ್ಲಿ ಸಿಕ್ತು ದೇಹದ ಭಾಗಗಳು

Share with Friends
author avatar
News Desk