Latestಬೆಂಗಳೂರು-Bengaluruರಾಜ್ಯ-Karnataka

ಸರ್ಕಾರದಿಂದ ಏ.14 ರಂದು ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಕಡ್ಡಾಯವೆಂದು ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಇದೇ ತಿಂಗಳೂ ಏಪ್ರಿಲ್ 10 ರಂದು ಮುಕ್ತಾಯವಾಗಲಿದೆ. ಆದರೆ ಏಪ್ರಿಲ್ 14 ರಂದು ಡಾ.ಬಿ.ಆರ್ ಅಂಬೇಡ್ಕರ್ ಜಯಂತಿಯಿದ್ದು, ರಾಜ್ಯದಲ್ಲಿರುವ ಎಲ್ಲ ಪ್ರಥಾಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸುವಂತೆ ರಾಜ್ಯ ಸರ್ಕಾರ ತಿಳಿಸಿದೆ. ಇದನ್ನೂ ಓದಿ:ಹೆಂಡತಿಯ ಬರ್ಬರ ಹತ್ಯೆ, ಜಗಳ ಬಿಡಿಸಲು ಬಂದ ಅತ್ತೆಯೂ ಗಂಭೀರ

https://youtu.be/iMxTkg_jFTY?si=C8JP3PjiBhsmCG6M

ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ, ಮುಖ್ಯಶಿಕ್ಷಕರು, ಸಿಬ್ಬಂದಿ, ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ವಿದ್ಯಾರ್ಥಿಗಳ ಸಹಿಭಾಗಿತ್ವದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸುವಂತೆ ಎಲ್ಲಾ ಶಾಲಾ ಮುಖ್ಯಸ್ಥರಿಗೆ, ಕ್ಷೇತ್ರ ಶಿಕ್ಷಾಣಧೀಕರಿಗಳಿಗೆ, ಉಪ ನಿರ್ದೇಶಕರಿಗೆ ತಿಳಿಸಿದೆ. ಇದನ್ನೂ ಓದಿ:ದ್ವಿತೀಯ ಪಿಯುಸಿ ಫಲಿತಾಂಶ ಪಕ್ರಟ.. ದಕ್ಷಿಣ ಕನ್ನಡ ಪ್ರಥಮ

https://youtu.be/_Nk-Jm289Is?si=nZIcQKe5hPz-9V8Q
Share with Friends
author avatar
News Desk