BlogLatestTop Storiesರಾಜ್ಯ-Karnataka

ದಸರಾ ಸಂಭ್ರಮದಲ್ಲೇ 2ನೇ ಮಗುವಿಗೆ ಜನ್ಮ ನೀಡಿದ ಮಹಾರಾಣಿ ತ್ರಿಷಿಕಾ ದೇವಿ

ಮೈಸೂರು: ಸಮಯದಲ್ಲೇ ಯುವರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹಾಗೂ ಪತ್ನಿ ತ್ರಿಷಿಕಾ ದಂಪತಿ ಅವರು ಎರಡನೇ ಮಗುವನ್ನು ಬರಮಾಡಿಕೊಂಡಿದ್ದಾರೆ. ಸದ್ಯ ದಸರಾ ಹೊತ್ತಲ್ಲೇ ಒಡೆಯರ್‌ ಕುಟುಂಬದಲ್ಲಿ ಸಂಭ್ರಮ ದುಪ್ಪಟ್ಟಾಗಿದೆ.

ಯದುವೀರ್ ಹಾಗೂ ಪತ್ನಿ ರಾಣಿ ತ್ರಿಷಿಕಾ ಕುಮಾರಿ ದಂಪತಿಗೆ ಎರಡನೇ ಗಂಡು ಮಗು ಜನಿಸಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ತಾಯಿ, ಮಗು ಇಬ್ಬರೂ ಕ್ಷೇಮವಾಗಿದ್ದಾರೆ ಎಂದು ತಿಳಿದುಬಂದಿದೆ. ಮೈಸೂರು ದಸರಾ ಆಚರಣೆಯಲ್ಲಿದ್ದ ರಾಜರ ಕುಟುಂಬವು ಸದ್ಯ ಎರಡೆರಡು ಹಬ್ಬದ ಸಂಭ್ರಮದಲ್ಲಿದೆ.

ಬಳಿಕ ಆನೆ ತೊಟ್ಟಿಯಲ್ಲಿ ಪಟ್ಟದ ಹಸು, ಪಟ್ಟದ ಕುದುರೆ, ಪಟ್ಟದ ಆನೆ, ಪಲ್ಲಕ್ಕಿ ಹಾಗೂ ರಾಜರು ಬಳಸುವ ದುಬಾರಿ ಬೆಲೆಯ ಕಾರುಗಳಿಗೆ ಪೂಜೆ ಸಲ್ಲಿಸಿದರು.ಸಂಜೆ ರತ್ನ ಖಚಿತ ಸಿಂಹಾಸನದಲ್ಲಿ ಖಾಸಗಿ ದರ್ಬಾರ್ ನಡೆಸಿ, ಬಳಿಕ ಸಿಂಹಾಸನದಲ್ಲಿ ಜೋಡಿಸಲಾದ ಸಿಂಹದ ತಲೆಯನ್ನು ವಿಸರ್ಜನೆ ಮಾಡುತ್ತಾರೆ.

Share with Friends
author avatar
News Desk