BlogLatestTop Storiesರಾಷ್ಟ್ರೀಯ-National

ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ 3 ಉಗ್ರರನ್ನು ಹೊಸಕಿಹಾಕಿದ ಸೇನೆ  

ಜಮ್ಮು-ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆ ತಂಗ್ಧಾರ್ ನಲ್ಲಿ ಕೆಲ ಉಗ್ರರು ಗಡಿ ನುಸುಳಲು ಯತ್ನ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆಮಾಡಿದೆ.  

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನಾಪಡೆ ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿತ್ತು. ಇದರಂತೆ ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡಿದ್ದು, ಕಾರ್ಯಾಚರಣೆ ಮುಂದುವರೆಸಿದೆ.

ಈ ನಡುವೆ ರಜೌರಿಯಲ್ಲಿಯೂ ಉಗ್ರರು ಹಾಗೂ ಸೇನಾಪಡೆ ನಡುವೆ ಗುಂಡಿನ ಕಾಳಗ ಮುಂದುವರೆದಿದ್ದು, ಸೇನಾಪಡೆ ಎನ್ಕೌಂಟರ್ ಆರಂಭಿಸಿದೆ.

ಖೇರಿ ಮೊಹ್ರಾ ಲಾಠಿ ಮತ್ತು ದಂತಲ್ ಪ್ರದೇಶದಲ್ಲಿ ನಿನ್ನೆ ರಾತ್ರಿ 9:30ರ ಸುಮಾರಿಗೆ ಅನುಮಾನಾಸ್ಪದ ಓಡಾಟಗಳು ಕಂಡು ಬಂದ ಹಿನ್ನೆಲೆಯಲ್ಲಿ ಸೇನಾಪಡೆ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು.

ಸ್ಥಳದಲ್ಲಿ ಇಬ್ಬರು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಸ್ಥಳ ಸುತ್ತುವರೆದಿರುವ ಸೇನಾಪಡೆ ಉಗ್ರರ ಸದೆಬಡಿಯಲು ಕಾರ್ಯಾಚರಣೆ ಮುಂದುವರೆಸಿದೆ.

Share with Friends
author avatar
News Desk