Blogepaperಬೆಂಗಳೂರು-Bengaluruರಾಜ್ಯ-Karnataka

ಗೇಟ್ ಬಿದ್ದು ಸಾವನ್ನಪ್ಪಿದ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ, ನಾಲ್ವರು ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು : ಬೆಂಗಳೂರಿನಲ್ಲಿ ಗೇಟ್ ಬಿದ್ದು ಮೃತಪಟ್ಟ ಬಾಲಕ ನಿರಂಜನ್ ಕುಟುಂಬಕ್ಕೆ ಡಿಸಿಎಂ ಡಿಕೆ ಶಿವಕುಮಾರ್ 5 ಲಕ್ಷ ಪರಿಹಾರ ಘೋಷಿಸಿಸಿದ್ದಾರೆ,ಜೊತೆಗೆ ಈ ಘಟನೆಗೆ ಕಾರಣರಾದ ಅಧಿಕಾರಿಗಳನ್ನ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಪ್ರಕರಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದ ಕಾರಣ, ಸಹಾಯಕ ಎಂಜಿನಿಯರ್ ಶ್ರೀನಿವಾಸ್ ರಾಜು ಅಮಾನತಿಗೆ ಆದೇಶ ಮಾಡಲಾಗಿದ್ದು, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗಳಾದ ಕೆ. ಶಾಂತಲಾ, ದೇವರಾಜು, ಬೇಬಿ ಆಯೇಷಾ ಹುಸೇನ್ ಅವರನ್ನು ಅಮಾನತುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಕಾರ್ಯಪಾಲಕ ಇಂಜಿನಿಯರ್ ಎಲ್.ವೆಂಕಟೇಶ್ ಅವರಿಗೆ ಈ ಘಟನೆ ಬಗ್ಗೆ ಕಾರಣ ಕೇಳಿ ನೋಟೀಸ್ ನೀಡಲಾಗಿದೆ.

ಮೂರು ವರ್ಷಗಳ ಹಿಂದೆ 2021 ರ ಮೇ 21 ರಂದು ಈ ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿತ್ತು.ಈ ಘಟನೆಯ ನಂತರ ಸ್ಥಳ ಪರಿಶೀಲನೆ ವೇಳೆ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸದೇ ಇರುವುದು ಹಾಗೂ ಮೈದಾನ ನಿರ್ವಹಣೆಯಲ್ಲಿ ಕೊರತೆ ಉಂಟಾಗಿರುವುದು ಕಂಡುಬಂದಿದೆ.

Share with Friends
author avatar
News Desk