Crime NewsLatestTop Storiesಉತ್ತರ ಕನ್ನಡ-Uttara Kannadaಜಿಲ್ಲಾ ಸುದ್ದಿಗಳು | District Newsರಾಜ್ಯ-Karnataka

ರಸ್ತೆ ಅಪಘಾತಕ್ಕೆ 6 ಮಂದಿ ಬಲಿ,ಮೂವರ ಸ್ಥಿತಿ ಚಿಂತಾಜನಕ

ಉತ್ತರ ಕನ್ನಡ : ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ-52ರಲ್ಲಿ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗೋಕರ್ಣ-ಧರ್ಮಸ್ಥಳ ಪ್ರವಾಸಕ್ಕೆ ತೆರಳುತ್ತಿದ್ದ ಧಾರವಾಡ ಮೂಲದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಧಾರವಾಡದಿAದ ತೂಫಾನ್ ಕ್ರೂಸರ್ ವಾಹನದಲ್ಲಿ ಒಟ್ಟು ಒಂಬತ್ತು ಮಂದಿ ಸ್ನೇಹಿತರು ಧರ್ಮಸ್ಥಳ ಹಾಗೂ ಗೋಕರ್ಣ ಪ್ರವಾಸಕ್ಕೆ ತೆರಳುತ್ತಿದ್ದರು.ಬೆಳಗಿನ ಜಾವ ಸುಮಾರು 1.30 ಗಂಟೆ ಸುಮಾರಿಗೆ ಆರತಿಬೈಲು ಬಳಗಾರ ಕ್ರಾಸ್ ಸಮೀಪ ತಲುಪಿದ ವೇಳೆ, ಅಂಕೋಲಾದಿAದ ಯಲ್ಲಾಪುರ ಕಡೆಗೆ ಬರುತ್ತಿದ್ದ ಲಾರಿ ಗೆ ಕ್ರೂಸರ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕ್ರೂಸರ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ,ಕ್ರೂಸರ್ ಚಾಲಕ ಸಂಜೀವ್ ಮೈಲಾರ ಅಂಗಡಿ ವಾಹನವನ್ನು ರಸ್ತೆಯ ಬಲಭಾಗಕ್ಕೆ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರೆಲ್ಲರೂ ಧಾರವಾಡ ಮೂಲದವರಾಗಿದ್ದು, ಅವರಲ್ಲಿ ಕೆಲವರು ಸ್ವಿಗ್ಗಿ ಸಂಸ್ಥೆಯಲ್ಲಿ ಪಾರ್ಟ್ಟೈಮ್ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಅಪಘಾತದ ಭೀಕರತೆಗೆ ಕ್ರೂಸರ್‌ನಲ್ಲಿದ್ದ ಆರು ಸಾವನ್ನಪ್ಪಿದ್ದು, ಮೃತರನ್ನು ಬಸವರಾಜ್ (48 ವರ್ಷ), ಅಭಿಷೇಕ್ ಈಶ್ವರ್ (28 ವರ್ಷ), ಅಕ್ಷಯ (26 ವರ್ಷ), ಅಭಿಷೇಕ್ (26 ವರ್ಷ), ಸಂಜೀವ / ಸಂಜಯ ಅಂಗಡಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಇದರಲ್ಲಿ ಒಬ್ಬರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಕೊನೆಯುಸಿರು ಎಳೆದಿದ್ದಾರೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವವರನ್ನು ತಕ್ಷಣವೇ ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಗಾಯಳುಗಳನ್ನು ಶಿವರಾಜ್ ದುರ್ಗಪ್ಪ ಮಡಿವಾಳ್ (22 ವರ್ಷ), ಮಂಜುನಾಥ್ ಅಶೋಕ್ ಚುಲಕಿ (32 ವರ್ಷ), ಸಚಿನ್, ಚೆನ್ನಬಸಯ್ಯ ಬಸಲಿಂಗಯ್ಯ ಸಂಪಗಾವ (28 ವರ್ಷ) ಎಂದು ಹೇಳಲಾಗಿದೆ. ಅವರನೆಲ್ಲಾ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಕೆಎಂಸಿ ಆಸ್ಪತ್ರೆ, ಹುಬ್ಬಳ್ಳಿಗೆ ರವಾನಿಸಲಾಗಿದ್ದು,ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಯಲ್ಲಾಪುರ ಪೊಲೀಸರು, ಹೆದ್ದಾರಿ ಗಸ್ತು ಸಿಬ್ಬಂದಿ ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಮೃತದೇಹಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು.

ಈ ಭೀಕರ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ-52ರಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.ಈ ಸಂಬAಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Share with Friends
author avatar
Digital Desk