Crime NewsLatestಬೆಂಗಳೂರು-Bengaluruರಾಜ್ಯ-Karnataka

6 ವರ್ಷದ ಬಾಲಕಿಯ ಶವ ರೈಲ್ವೆ ನಿಲ್ದಾಣದಲ್ಲಿ ಪತ್ತೆ – ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಶಂಕೆ

ಬೆಂಗಳೂರು: ಆರು ವರ್ಷದ ಬಾಲಕಿಯ ಮೃತದೇಹ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ (KSR) ಇಂದು ಪತ್ತೆಯಾಗಿದೆ.

ರೈಲ್ವೆ ನಿಲ್ದಾಣದ ಬಳಿಯ ಮೆಜೆಸ್ಟಿಕ್ ರೈಲು ನಿಲ್ದಾಣ ಬಳಿಯ ಪಾರ್ಕಿಂಗ್​ ಸ್ಥಳದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದ್ದು ಕೂಲಿ ಕೆಲಸ ಮಾಡುವ ದಂಪತಿಯ 6 ವರ್ಷದ ಮಗಳ ಎಂದು ಗೊತ್ತಾಗಿದೆ.

ಬಾಲಕಿ ಮೈಮೇಲೆ ಪರಚಿದ ಗಾಯಗಳು ಹಾಗೂ ರಕ್ತಸಿಕ್ತ ಬಟ್ಟೆಗಳಿಂದ ಬಾಲಕಿ ಶವ ಕಂಡುಬಂದಿದೆ. ಹೀಗಾಗಿ ಅತ್ಯಾಚಾರ ಎಸಗಿ ಕೊಲೆ ಮಾಡಿ ಬಳಿಕ ಪಾರ್ಕಿಂಗ್ ಸ್ಥಳದಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಮೊದಲ ಬಾರಿಗೆ ಮಗನನ್ನು ನೋಡಲು ಪರಪ್ಪನ ಅಗ್ರಹಾರಕ್ಕೆ ಬಂದ ರೇವಣ್ಣ

https://youtu.be/JCrzNBZiNqk?si=2hLRmtIxb9rq0eaw

ಬಾಲಕಿಯನ್ನ ಕಂಡು ಕೂಡಲೇ ಪಾರ್ಕಿಂಗ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ರೈಲ್ವೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀನಲೆ ನಡೆಸಿದ್ದಾರೆ.

ಸದ್ಯ ಬಾಲಕಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಬಗ್ಗೆ ರೈಲ್ವೆ ಪೊಲೀಸರು ತನಿಜೆ ಕಗೊಂಡಿದ್ದು, ಇಲ್ಲಿಗೆ ಶವ ತಂದು ಹಾಕಿದವರು ಯಾರು ಎನ್ನುವುದನ್ನು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತ- ಮಣ್ಣಿನಡಿ ಸಿಲುಕಿದ ಕಾರ್ಮಿಕರು

ಇನ್ನು ಈ ಬಗ್ಗೆ ರೈಲ್ವೆ ಎಸ್ ಪಿ ಡಾ. ಸೌಮ್ಯ ಲತಾ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್‌ನಲ್ಲಿ ಒಂದು ಹೆಣ್ಣು ಮಗವಿನ ಮೃತ ದೇಹ ಸಿಕ್ಕಿದೆ. ನಮ್ಮ ಸಿಬ್ಬಂದಿ ಬಂದು ತಿಳಿಸಿದ್ದು, ಪರಿಶೀಲನೆ ನಡೆಸಲಾಗಿದೆ. ದೇಹದ ಮೇಲೆ ಸಾಕಾಷ್ಟು ಗಾಯಗಳಾಗಿವೆ, ಸಿಸಿಟಿವಿ ದೃಶ್ಯ ಪರಿಶೀಲನೆ ನಡೆಸಲಾಗುತ್ತಿದೆ. ಕೊಲೆ ಮಾಡಿ ಎಲ್ಲಿಂದಲ್ಲೋ ತಂದು ಇಲ್ಲಿ ಎಸೆಯಲಾಗಿದೆ. ಭಿಕ್ಷಾಟನೆ ಮಾಡುತ್ತಿದ್ದ ಕುಟುಂಬದ ಮಗು ಎಂದು ತಿಳಿದು ಬಂದಿದ್ದು, ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ದೆಹಲಿಯ ಕರ್ನಾಟಕ ಭವನದ ಅಡುಗೆ ನೌಕರನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

https://youtu.be/N8c96Add8Vs?si=x8z31UiPVswGplCf
Share with Friends
author avatar
News Desk