Latestರಾಷ್ಟ್ರೀಯ-National

ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್‌ ಬೆಲೆಯಲ್ಲಿ 69.50 ರೂ. ಇಳಿಕೆ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ಜೂನ್ 1 ರಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ (Commercial LPG Gas Cylinders) ಬೆಲೆಯನ್ನು 69.50 ರೂ. ಕಡಿತಗೊಳಿಸಿವೆ.

ಇದರೊಂದಿಗೆ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ 1,676 ರಷ್ಟಿದೆ. ದೇಶಾದ್ಯಂತ ಮೆಟ್ರೋ ನಗರಗಳಿಗೂ ಇದು ಅನ್ವಯವಾಗಿದೆ. ಚೆನ್ನೈನಲ್ಲಿ ಬೆಲೆ 1,841.50 ರಷ್ಟಿದ್ದರೆ, ಕೋಲ್ಕತ್ತಾದಲ್ಲಿ ಬೆಲೆ ಕಡಿತದ ನಂತರ 1,789.50 ರೂ. ಆಗಿದೆ. ಮುಂಬೈನಲ್ಲಿ ಕೂಡ 69.50 ರೂ. ಇಳಿಕೆಯಾಗಿದ್ದು, ಪರಿಷ್ಕೃತ ಬೆಲೆಯನ್ನು 1,629 ಕ್ಕೆ ನಿಗದಿಪಡಿಸಲಾಗಿದೆ. ಇದನ್ನೂ ಓದಿ: ನಾನು ಆರೋಗ್ಯವಾಗಿದ್ದೇನೆ: ಶಾಮನೂರು ಶಿವಶಂಕರಪ್ಪ

https://youtu.be/Xmp5YfB-Rt4?si=kpqUo8boWMP62wbL

ಕಳೆದ ಮಾರ್ಚ್‌ 1 ರಂದು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ದರ 19 ರೂ. ಇಳಿಕೆಯಾಗಿತ್ತು. ಏಪ್ರಿಲ್‌ನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್‌ಗಳು ಮತ್ತು 5 ಕೆಜಿ ಎಫ್‌ಟಿಎಲ್ (ಫ್ರೀ ಟ್ರೇಡ್ ಎಲ್‌ಪಿಜಿ) ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ 30.50 ರೂ. ಮತ್ತು 7.50 ರೂ. ರಷ್ಟು ಕಡಿತಗೊಳಿಸಲಾಗಿತ್ತು. ಇದನ್ನೂ ಓದಿ: ಸಂತ್ರಸ್ತೆ ಅಪಹರಣ ಕೇಸ್‌; ಯಾವುದೇ ಕ್ಷಣದಲ್ಲಿ ಭವಾನಿ ರೇವಣ್ಣ ಬಂಧನ ಸಾಧ್ಯತೆ

https://youtu.be/r32NMq7j5QU?si=0BKunZ6b4f3JlDz-

ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಪ್ರತಿ ತಿಂಗಳ 1 ರಂದು ಅಡುಗೆ ಅನಿಲ ಬೆಲೆಗಳನ್ನು ಪರಿಷ್ಕರಿಸುತ್ತವೆ. ಇದನ್ನೂ ಓದಿ: ಪ್ರಜ್ವಲ್‌ಗೆ ಎಸ್‌ಐಟಿ ಅಧಿಕಾರಿಗಳ ಸಾಲು ಸಾಲು ಪ್ರಶ್ನೆ: ಉತ್ತರ ನೀಡದೇ ಅಸಹಕಾರ

https://youtu.be/2ONTNblDGvk?si=UKNU45jGmjXByjqa

ಬೆಲೆ ಇಳಿಕೆಯ ಹಿಂದಿನ ನಿಖರವಾದ ಕಾರಣಗಳನ್ನು ಬಹಿರಂಗಪಡಿಸಲಾಗಿಲ್ಲವಾದರೂ, ಅಂತರರಾಷ್ಟ್ರೀಯ ತೈಲ ಬೆಲೆಗಳಲ್ಲಿನ ಬದಲಾವಣೆಗಳು, ತೆರಿಗೆ ನೀತಿಗಳಲ್ಲಿನ ಬದಲಾವಣೆಗಳು ಮತ್ತು ಪೂರೈಕೆ-ಬೇಡಿಕೆ ಯಂತಹ ವಿವಿಧ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಬೆಲೆ ಪರಿಷ್ಕರಿಸಲಾಗುತ್ತದೆ. ಇದನ್ನೂ ಓದಿ: ಕೊಟ್ಟಿರುವ ರೂಂ ಸರಿಯಿಲ್ಲ, ಕೆಟ್ಟ ವಾಸನೆ ಬರುತ್ತಿದೆಂದು ಜಡ್ಜ್‌ ಮುಂದೆ ಅಳಲು ತೋರಿಕೊಂಡ ಪ್ರಜ್ವಲ್‌

https://youtu.be/ZTT_DtVT9KQ?si=Xw5ro3Q2TUClxCV7
Share with Friends
author avatar
News Desk