ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ 9 ಮಂದಿ ಸಾವು- ಕರ್ನಾಟಕದಿಂದ ನಾಲ್ವರು
ಡೆಹ್ರಾಡೂನ್: ಉತ್ತರಾಖಂಡದಲ್ಲಿ (Uttarakhand) ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ (Karnataka) ನಾಲ್ವರು ಸೇರಿ 9 ಮಂದಿ ಚಾರಣಿಗರು ಮೃತಪಟ್ಟಿದ್ದಾರೆ.
ಬೆಂಗಳೂರಿನ ಸುಜಾತ (52), ಪದ್ಮಿನಿ ಹೆಗಡೆ (35), ಚಿತ್ರಾ (48), ಸಿಂಧು (45), ವೆಂಕಟೇಶ್ ಪ್ರಸಾದ್ (52), ಅನಿತಾ (61), ಆಶಾ ಸುಧಾಕರ (72), ಪದ್ಮನಾಭನ್ ಕೆಪಿಎಸ್ (50) ವಿನಾಯಕ್ ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ 18, ಪುಣೆಯಿಂದ ಒಬ್ಬರು ಜೊತೆ ಟ್ರೆಕ್ಕಿಂಗ್ ಗೈಡ್ಗಳಾಗಿ ಉತ್ತರ ಕಾಶಿಯ ಮೂವರು ನಿವಾಸಿಗಳು ತೆರಳಿದ್ದರು. ಇದನ್ನೂ ಓದಿ: ಜೊತೆಗೆ ದೆಹಲಿಗೆ ಹಾರಿದ ನಿತೀಶ್ ಕುಮಾರ್, ತೇಜಸ್ವಿ ಯಾದವ್
ಉತ್ತರಾಖಂಡದ ಸಹಸ್ತ್ರ ತಾಲ್ನಲ್ಲಿ (Sahastra Tal) ಸಿಲುಕಿದ್ದ ಚಾರಣಿಗರ ಪೈಕಿ ಸೌಮ್ಯಾ, ವಿನಯ, ಶಿವಜ್ಯೋತಿ, ಸುಧಾಕರ್, ಸ್ಮೃತಿ, ಸೀನಾ ಅವರನ್ನು ರಕ್ಷಣೆ ಮಾಡಲಾಗಿದೆ. 13 ಜನರ ಸ್ಥಿತಿ ಗಂಭೀರವಾಗಿದ್ದು ವಾಯು ಪಡೆಯಿಂದ ಹೆಲಿಕಾಪ್ಟರ್ (Helicopter) ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ:ದೆಹಲಿಯತ್ತ ಹೆಚ್.ಡಿ. ಕುಮಾರಸ್ವಾಮಿ
ಮೇ 29ರಿಂದ ಜೂನ್ 7ರವರೆಗೆ ಭಟವಾಡಿ ಮಲ್ಲಾ – ಸಿಲ್ಲಾ – ಕುಶಕಲ್ಯಾಣ – ಸಹಸ್ತ್ರತಾಲ್ ಟ್ರೆಕ್ಕಿಂಗ್ಗೆ (Trekking) ಅನುಮತಿ ಪಡೆದಿದ್ದರು. ಒಟ್ಟು 9 ಚಾರಣಿಗರು ಮೃತಪಟ್ಟಿದ್ದನ್ನು ಉತ್ತರಕಾಶಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿ ದೇವೇಂದ್ರ ಪಟವಾಲ್ ಖಚಿತ ಪಡಿಸಿದ್ದಾರೆ. ಇದನ್ನೂ ಓದಿ:ಕಾಂಗ್ರೆಸ್ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ ಪರ ಜೈಕಾರ – ಆರೋಪಿ ಬಂಧನ
ಚಾರಣವನ್ನು ಮೌಂಟೇನಿಯರಿಂಗ್ ಫೌಂಡೇಶನ್ ಆಯೋಜಿಸಿತ್ತು. ಗಢವಾಲ್ ಜಿಲ್ಲಾಧಿಕಾರಿ ರಕ್ಷಣಾ ಕಾರ್ಯಾಚರಣೆಯ ಉಸ್ತುವಾರಿ ವಹಿಸಿದ್ದು ಭಾರತೀಯ ವಾಯುಪಡೆಯ ನೆರವನ್ನು ಪಡೆಯಲಾಗುತ್ತಿದೆ. ಇದನ್ನೂ ಓದಿ: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಕರ್ನಾಟಕದ ಆರು ಮಂದಿ ಟಾಪರ್ಸ್
