BlogLatestಚಿಕ್ಕಮಗಳೂರು-Chikkamagaluruರಾಜ್ಯ-Karnataka

60 ಅಡಿ ಆಳದ ಬಾವಿಗೆ ಬಿದ್ದು ಬದುಕಿ ಬಂದ 94 ವರ್ಷದ ವೃದ್ಧೆ

ಚಿಕ್ಕಮಗಳೂರು: ಕಾಲು ಜಾರಿ 60 ಅಡಿ ಆಳದ ಬಾವಿಗೆ ಬಿದ್ದಿದ್ದ 94 ವರ್ಷದ ವೃದ್ಧೆ ಅಚ್ಚರಿಯ ರೀತಿಯಲ್ಲಿ ಬದುಕಿಬಂದ ಘಟನೆ ಕೊಪ್ಪ ತಾಲೂಕಿನ ಮರಕಟ್ಟೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಕಮಲ ಎಂಬ ವೃದ್ಧೆ ಕಾಲು ಜಾರಿ ಬಾವಿಗೆ ಬಿದ್ದಿದ್ದರು. ನೀರಿನಲ್ಲಿ ಮುಳುಗದಂತೆ ಬಾವಿಯೊಳಗೆ ಪೈಪ್ ಹಿಡಿದುಕೊಂಡು ಒಂದು ಗಂಟೆಗೂ ಹೆಚ್ಚು ಕಾಲ ಅವರು ಸಾವು ಬದುಕಿನ ನಡುವೆ ಹೋರಾಡಿದ್ದಾರೆ. ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದೆ. ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ವೃದ್ಧೆಯನ್ನು ರಕ್ಷಿಸಿದ್ದಾರೆ.

ಹಗ್ಗದ ಸಹಾಯದಿಂದ ಅಗ್ನಿಶಾಮಕ ಸಿಬ್ಬಂದಿ ವಿಶ್ವನಾಥ ಅವರು ವೃದ್ಧೆಯನ್ನು ಮೇಲೆತ್ತಿದ್ದಾರೆ. ಅವರ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share with Friends
author avatar
News Desk