BlogLatestರಾಜ್ಯ-Karnataka

ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ನಾಳೆ ಮಾಂಸ ಮಾರಾಟಕ್ಕೆ ನಿಷೇಧ!

ಬೆಂಗಳೂರು: ಆಗಸ್ಟ್‌ 26 ರಂದು ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ನಾಳೆ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ. ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ, ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ಬಂದ್ ಮಾಡಬೇಕೆಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಯಾವುದೇ ಮಾಂಸ ಮಾರಾಟದ ಅಂಗಡಿಗಳು, ಕೋಳಿ ಅಂಗಡಿಗಳು, ಮೀನುಮಾರಾಟ ಮಾಡಬಾರದು ಎಂದು ಖಡಕ್ ಆಗಿ ಸೂಚಿಸಲಾಗಿದೆ. ಆದೇಶ ಮೀರಿ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಿದ್ದಾರೆ.

Share with Friends
author avatar
News Desk