BlogEntertainmentಸ್ಯಾಂಡಲ್​ವುಡ್-Sandalwood

“ರಿಪ್ಪನ್ ಸ್ವಾಮಿ”ಯಾಗಿ ರಾ ಲುಕ್‌ನಲ್ಲಿ ವಿಜಯ ರಾಘವೇಂದ್ರ

ವಿಜಯ ರಾಘವೇಂದ್ರ ನಟನೆಯ ಮಾಸ್ ಕಥೆಯನ್ನ ಒಳಗೊಂಡಿರುವ “ರಿಪ್ಪನ್ ಸ್ವಾಮಿ” ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿ ಜಾಲತಾಣದಲ್ಲಿ ಬಾರಿ ಸದ್ದು ಮಾಡುತ್ತಿದೆ.

ಸಿನಿಮಾ ಪಂಚಾಂನನ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾ ಈ ಸಂಸ್ಥೆಯ ಮೊದಲ ಚಿತ್ರವಾಗಿದೆ. ಈ ಚಿತ್ರಕ್ಕೆ ಯುವ ನಿರ್ದೇಶಕ ಕಿಶೋರ್ ಮೂಡುಬಿದ್ರೆ ಆಕ್ಷನ್ ಕಟ್ ಹೇಳುತ್ತಿದ್ದು ನಟ ವಿಜಯ ರಾಘವೇಂದ್ರ ಪ್ರಮುಖ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ರಿಪ್ಪನ್ ಸ್ವಾಮಿ ಚಿತ್ರದ ರಾ ಫಸ್ಟ್ ಲುಕ್ ಪೋಸ್ಟರ್ ನಲ್ಲಿ ರೆಡ್ ಫ್ಲಾಗ್ ಎಂಬ ಅಡಿಬರಹ ಗಮನ ಸೆಳೆಯುತ್ತಿದೆ. ಈ ಹಿಂದೆ ಮಾಲ್ಗುಡಿ ಡೇಸ್ ಚಿತ್ರವನ್ನ ನಿರ್ದೇಶನ ಮಾಡಿದ್ದ ಕಿಶೋರ್ ಮೂಡಬಿದ್ರೆ “ರಿಪ್ಪೆನ್ ಸ್ವಾಮಿ “ಮೂಲಕ ಒಂದು ಮಾಸ್ ಕಥೆ ಹೇಳಲು ಹೊರಟಿದ್ದಾರೆ. ಇನ್ನು ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು , 48 ದಿನಗಳ ಕಾಲ ಕೊಪ್ಪ , ಕಳಸ , ಬಾಳೆ ಹೊನ್ನೂರು ಸುತ್ತಮುತ್ತ ಚಿತ್ರೀಕರಣವನ್ನು ನಡೆಸಲಾಗಿದೆಯಂತೆ.

ಈ ಚಿತ್ರದಲ್ಲಿ ವಿಜಯ ರಾಘವೇಂದ್ರ ಜೊತೆ ಅಶ್ವಿನಿ ಚಂದ್ರಶೇಖರ್, ಪ್ರಕಾಶ್ ತುಮ್ಮಿನಾಡು ,ವಜ್ರದೀರ್ ಜೈನ್ , ಯಮುನಾ ಶ್ರೀನಿಧಿ, ಮೋಹನ್ ಶೇಣಿ, ಕೃಷ್ಣಮೂರ್ತಿ ಕವತ್ತಾರ್ ಸೇರಿದಂತೆ ಹಲವಾರು ಕಲಾವಿದರು ಅಭಿನಯಿಸಿದ್ದು, ಈ ಸಿನಿಮಾದಲ್ಲಿ ಮಲಯಾಳಂನ ಖ್ಯಾತ ಸಂಗೀತ ನಿರ್ದೇಶಕ ಸ್ಯಾಮ್ಯುವೆಲ್ ಅಭಿ ಸಂಗೀತವನ್ನು ನೀಡುತ್ತಿದ್ದಾರೆ.

ರಂಗನಾಥ್. ಸಿ .ಎಂ ರವರು ಕ್ಯಾಮರಾ ವರ್ಕ್ ಈ ಚಿತ್ರಕ್ಕಿದ್ದು. ತನ್ನ ಎಲ್ಲಾ ಕೆಲಸವನ್ನು ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತ ತಲುಪಿದೆ. ಚಿತ್ರವನ್ನ ಆದಷ್ಟು ಬೇಗ ಬೆಳ್ಳಿ ಪರದೆ ಮೇಲೆ ತರಲು ಚಿತ್ರತಂಡ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದೆಯಂತೆ.

Share with Friends
author avatar
News Desk