BlogLatestಬೆಂಗಳೂರು-Bengaluru

ಬಾಕಿ ಬಿಲ್ ಪಾವತಿಗಾಗಿ ಬಿಬಿಎಂಪಿ ಗುತ್ತಿಗೆದಾರರ ಉಪವಾಸ ಸತ್ಯಾಗ್ರಹ

ಬೆಂಗಳೂರು : ಬಿಬಿಎಂಪಿ ಗುತ್ತಿಗೆದಾರರ ಸಂಘ ಮತ್ತು ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರರ ಸಂಘವು ಜಂಟಿಯಾಗಿ ಬಿಬಿಎಂಪಿ ಪಾಲಿಕೆ ಗುತ್ತಿಗೆದಾರರ ಶೇಕಡ 25%ಬಾಕಿ ಬಿಲ್ ಬಿಡುಗಡೆಗಾಗಿ ಒತ್ತಾಯಿಸಿ ಕಾಮಗಾರಿ ಸ್ಥಗಿತಗೊಳಿಸಿ ಫೀಡಂಪಾರ್ಕ್ ನಲ್ಲಿ ಸಾವಿರಾರು ಗುತ್ತಿಗೆದಾರರು ಉಪವಾಸ ಸತ್ಯಾಗ್ರಹ.

ಬಿಬಿಎಂಪಿ ಪಾಲಿಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ನಂದಕುಮಾರ್ ಮತ್ತು ಬಿಬಿಎಂಪಿ ಕಾರ್ಯನಿರತ ಗುತ್ತಿದಾರರ ಸಂಘದ ಅಧ್ಯಕ್ಷರಾದ ಕೆ.ಟಿ.ಮಂಜುನಾಥ್ ರವರ ನೇತೃತ್ವದಲ್ಲಿ ನೂರಾರು ಗುತ್ತಿಗೆದಾರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಕಾರ್ಯಾಧ್ಯಕ್ಷರಾದ ಮಂಜುನಾಥ್ ಮತ್ತು ಪದಾಧಿಕಾರಿಗಳು ಹೋರಾಟಕ್ಕೆ ಬೆಂಬಲ ನೀಡಿದರು.

ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಜಿ.ಎಂ.ನಂದಕುಮಾರ್ ರವರು ಬಿಬಿಎಂಪಿ ಮುಖ್ಯ ಆಯುಕ್ತರು ಕೊಡಲೆ ಶೇಕಡ 25ರಷ್ಟು ಹಣ ಬಿಡುಗಡೆ ಮಾಡಬೇಕು. ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ಮಾಡಲಾಗುತ್ತಿದೆ.

Share with Friends
author avatar
News Desk