BlogLatestTop Storiesರಾಜ್ಯ-Karnataka

ಮಹತ್ವಾಕಾಂಕ್ಷೆಯ ಎತ್ತನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಚಾಲನೆ

ಹಾಸನ: ರಾಜ್ಯದ ಬರಪೀಡಿತ 7 ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಎತ್ತನಹೊಳೆ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರದ ವಿತರಣಾ ತೊಟ್ಟಿ 3ರಲ್ಲಿ ನೀರೆತ್ತುವ ಪಂಪ್ ಹಾಗೂ ಮೋಟಾರ್​ಗಳನ್ನು ಆನ್​ ಮಾಡುವ ಮೂಲಕ ಮುಖ್ಯಮಂತ್ರ ಸಿದ್ದರಾಮಯ್ಯ ಅವರು, ಯೋಜನೆಯ ಮೊದಲ ಹಂತವನ್ನು ಲೋಕಾರ್ಪಣೆಗೊಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಸಾಥ್​ ನೀಡಿದರು. ಅಲ್ಲದೇ ಇದೇ ವೇಳೆ ಏಳು ಸಚಿವರಿಂದ ದೊಡ್ಡನಗರದಲ್ಲೇ ನೀರನ್ನೆತ್ತುವ ಏಳು ವಿಯರ್​​ಗಳಿಗೂ ಚಾಲನೆ ನೀಡಲಾಯಿತು.

ಇದಕ್ಕೂ ಮೊದಲು ಬೆಳಗ್ಗೆ 8.30ರಿಂದ ಉದ್ಘಾಟನಾ ಸ್ಥಳದಲ್ಲಿ ಹೋಮ ಹವನ ನೆರವೇರಿತು. ಕಾರ್ಯಕ್ರಮದ ಉಸ್ತುವಾರಿಯನ್ನು ಜಲಸಂಪನ್ಮೂಲ ಇಲಾಖೆ ಸಚಿವ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಹಿಸಿದ್ದರು.

2026-27 ರೊಳಗೆ ಎತ್ತಿನಹೊಳೆ ಯೋಜನೆ ಪೂರ್ಣ :
ಎತ್ತಿನಹೊಳೆ ಯೋಜನೆಯನ್ನು ರೊಳಗೆ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಸಕಲೇಶಪುರದ ಹೆಬ್ಬನಹಳ್ಳಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು ಸರ್ಕಾರದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಶಂಕುಸ್ಥಾಪನೆಯನ್ನು ಚಿಕ್ಕಬಳ್ಳಾಪುರದಲ್ಲಿ ತಾನೇ ನಿರ್ವಹಿಸಿ, ಇಂದು ಮೊದಲನೇ ಹಂತದ ಯೋಜನೆಯನ್ನು ಸಂತೋಷದಿಂದ ಉದ್ಘಾಟಸುತ್ತಿದ್ದೇ‌ನೆ ಎಂದರು.

ಈ ಯೋಜನೆಯ ಪರಿಷ್ಕೃತ ಅಂದಾಜು 23,252 ಕೋಟಿ ರೂ.ಗಳಾಗಿದ್ದು, ಇದುವರೆಗೆ 16,152ಕೋಟಿ ರೂ.ಗಳನ್ನು ವೆಚ್ಚವಾಗಿದ್ದು, ಇನ್ನುಳಿದ 6-7 ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

Share with Friends
author avatar
News Desk