Blogಕಲಬುರಗಿ-Kalaburagiರಾಜ್ಯ-Karnataka

ಕಲ್ಯಾಣ ಕರ್ನಾಟಕ ಭಾಗದಲ್ಲಿ 15000 ಖಾಲಿ ಹುದ್ದೆಗಳ ಭರ್ತಿ : ಸಚಿವ‌ ಶರಣಪ್ರಕಾಶ್ ಪಾಟೀಲ್

ಕಲಬುರಗಿ : ಮುಂದಿನ ಒಂದು ವರ್ಷದ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 15000 ಹುದ್ದೆಗಳನ್ನೂ ಭರ್ತಿಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ‌ ಶರಣಪ್ರಕಾಶ್ ಪಾಟೀಲ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಶರಣ ಪ್ರಕಾಶ್ ಪಾಟೀಲ್, 2013-18 ರ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ13,000 ಶಿಕ್ಷಕರು ಸೇರಿದಂತೆ 30,000 ಖಾಲಿ ಹುದ್ದೆಗಳನ್ನು‌ ಭರ್ತಿ ಮಾಡಲಾಗಿದೆ. ಮುಂದಿನ ಒಂದು ವರ್ಷದ ಅವಧಿಯಲ್ಲಿ 6500 ಶಿಕ್ಷಕರು ಸೇರಿದಂತೆ 15000 ಖಾಲಿ ಹುದ್ದೆ ತುಂಬಲಾಗುವುದು ನಂತರ ಎರಡು ವರ್ಷದ ಅವಧಿಯಲ್ಲಿ 25,000 ಹುದ್ದೆ ತುಂಬಲಾಗುವುದು ಎಂದು ಹೇಳಿದರು.

ನಮ್ಮ ಸರ್ಕಾರದ ಅವಧಿ ಮುಗಿಯುವದರೊಳಗೆ 50,000 ಖಾಲಿ‌ಹುದ್ದೆ ತುಂಬುವುದಾಗಿ ಹಾಗೂ ವಾರ್ಷಿಕ 5000 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹಿರಿಯ ನಾಯಕರಾದ ಖರ್ಗೆ ಹಾಗೂ‌ ಸಿಎಂ ಭರವಸೆ ನೀಡಿದ್ರು ಅದಕ್ಕೆ ಬದ್ಧವಾಗಿದ್ದೇವೆ ಎಂದರು.

Share with Friends
author avatar
News Desk