BlogTop Storiesಬೆಂಗಳೂರು-Bengaluruರಾಜ್ಯ-Karnataka

ಒಡಿಶಾದಲ್ಲಿ ಆತ್ಮಹತ್ಯೆಗೆ ಶರಣಾದ ಮಹಾಲಕ್ಷ್ಮಿ ಹತ್ಯೆ ಆರೋಪಿ

ಬೆಂಗಳೂರು: ಮಹಾಲಕ್ಷ್ಮಿ ಕೊಲೆ ಪ್ರಕರಣದ ಆರೋಪಿ ಒಡಿಶಾದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮುಕ್ತಿ ರಂಜನ್ ರಾಯ್ ಆತ್ಮಹತ್ಯೆ ಮಾಡಿಕೊಂಡ ಶಂಕಿತ ಕೊಲೆ ಆರೋಪಿ. ಈತ ಮಹಾಲಕ್ಷ್ಮಿ ಕೊಲೆ ಬಳಿಕ ತಲೆಮರೆಸಿಕೊಂಡು ಓಡಾಡುತ್ತಿದ್ದ.

ಒಡಿಶಾದಲ್ಲಿ ಹಂತಕ ಇರುವ ಶಂಕೆ ಮೇರೆಗೆ ಪೊಲೀಸರು ಅಲ್ಲಿಗೆ ತೆರಳಿದ್ದರು. ಕೊಲೆ ಪ್ರಕರಣದ ಬಗ್ಗೆ ಒಡಿಶಾ ಪೊಲೀಸರಿಗೂ ಸಹ ಮಾಹಿತಿ ನೀಡಿದ್ದರು

ಸೆಪ್ಟೆಂಬರ್ 1ರ ತನಕ ಮಹಾಲಕ್ಷ್ಮಿ ಕೆಲಸಕ್ಕೆ ಹೋಗಿದ್ದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2 ಅಥವಾ 3 ರಂದು ಕೊಲೆ ಆಗಿರಬಹುದು ಎಂದು ಪೊಲೀಸರು ಸದ್ಯಕ್ಕೆ ಅಂದಾಜಿಸಿದ್ದಾರೆ. ಇನ್ನೂ ಆಕೆ ಕೆಲಸ ಮಾಡ್ತಿದ್ದ ಶಾಪ್‌ನ ಟೀಂ ಲೀಡರ್ ಮುಕ್ತಿರಂಜನ್ ಕೂಡ ಸೆಪ್ಟೆಂಬರ್ 1ರ ನಂತರ ಕೆಲಸಕ್ಕೆ ಬಾರದೇ ಇರೋದು ಹಲವು ಅನುಮಾಗಳಿಗೆ ಕಾರಣವಾಗಿತ್ತು.

.
ಈ ಮಧ್ಯೆ, ಮಹಾಲಕ್ಷ್ಮಿ ಶವವನ್ನು 59 ತುಂಡು ಮಾಡಿರುವ ಹಂತಕ ತುಂಬಾನೆ ಅಪಾಯಕಾರಿ ಎಂದು ಮನೋವೈದ್ಯರು ವಿಶ್ಲೇಷಣೆ ಮಾಡಿದ್ದರು. ಸುಡೋ ಮ್ಯಾಚೋಯಿಸಂ ಎಂಬ ಅಪರಾಧ ಸ್ವಭಾವ ಇರಬಹುದು. ಆತನನ್ನು ತಕ್ಷಣವೇ ಬಂಧಿಸದಿದ್ರೆ ಇನ್ನಷ್ಟು ಮಂದಿ ಇದೇ ರೀತಿ ಬಲಿಯಾಗಬಹುದು ಎಂದು ಎಚ್ಚರಿಕೆ ಸಹ ನೀಡಿದ್ದರು.

Share with Friends
author avatar
News Desk