BlogLatestರಾಜ್ಯ-Karnataka

ಗೃಹಲಕ್ಷ್ಮಿ ಹಣ ನಿಲ್ಲಲ್ಲ, ಶೀಘ್ರವೇ ನಿಮ್ಮ ಖಾತೆಗೆ ಜಮೆ ಆಗಲಿದೆ : ಲಕ್ಷ್ಮಿ ಹೆಬ್ಬಾಳ್ಕರ್‌

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆ ನಿರಂತರ ಪ್ರಕ್ರಿಯೆ ಸರ್ಕಾರ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಪಂಚಮಸಾಲಿ ಸಮುದಾಯಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರ ಕೊಡುಗೆ ಏನು ಎಂದು ಸಚಿವರು ಪ್ರಶ್ನಿಸಿದ ಹೆಬ್ಬಾಳ್ಕರ್‌ ನಾನು ಎಂದಿಗೂ ಪಂಚಮಸಾಲಿ ಮೀಸಲಾತಿ ಪರವಾಗಿದ್ದೇನೆ. 2ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಸದಾ ನನ್ನ ಬೆಂಬಲ ಇರುತ್ತದೆ ಎಂದರು.

Share with Friends
author avatar
News Desk