BlogLatestದಕ್ಷಿಣ ಕನ್ನಡ-Dakshina Kannadaರಾಜ್ಯ-Karnataka

ಹೆದ್ದಾರಿ ಮಧ್ಯೆ ಹೊತ್ತಿ ಉರಿದ ಬಿಎಂಡಬ್ಲ್ಯೂ ಕಾರು

ಮಂಗಳೂರು : ಹೆದ್ದಾರಿ ಮಧ್ಯೆ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ನಡೆದಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಕಾರಿನಿಂದ ಕೆಳಗಿಳಿದಿದ್ದಾನೆ ಎಂದು ತಿಳಿದು ಬಂದಿದೆ. ದೆಹಲಿ ನೋಂದಾಯಿತ ಬಿಎಂಡಬ್ಲ್ಯೂ ಕಾರು ಅರ್ಧಗಂಟೆಯಿಂದ ಹೊತ್ತಿ ಉರಿಯುತ್ತಿದ್ದು, ಸಂಪೂರ್ಣ ಭಸ್ಮವಾಗಿದೆ.

ಕಾರಿಗೆ ಬೆಂಕಿ ಹತ್ತಿಕೊಂಡಿದ್ದ ಬೆಂಕಿಯನ್ನು ಸ್ಥಳೀಯರು ನಂದಿಸಲು ಯತ್ನಿಸುವ ಮೊದಲೇ ಕಾರು ಸುಟ್ಟು ಸಂಪೂರ್ಣ ಕರಕಲಾಗಿದೆ. ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದರೂ, ಅಗ್ನಿಶಾಮಕ ದಳ ತಲುಪುವಷ್ಟರಲ್ಲಿ ಕಾರು ಸಂಪೂರ್ಣ ಭಸ್ಮವಾಗಿದೆ.

2011-12ರ ಮಾಡೆಲ್​ನ ಬಿಎಂಡಬ್ಲ್ಯೂ ಕಾರು ಇದಾಗಿದೆ. ಕಾರಿನಲ್ಲಿದ್ದ ಚಾಲಕ ಬಿ.ಸಿ. ರೋಡ್​​ನ ಗುರುದೀಪ್ ಬೆಂಕಿ ಹಾಣಿಸಿಕೊಂಡ ಬೆನ್ನಲ್ಲೇ ಕೆಳಗಿಳಿದಿದ್ದು, ಅವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ಮಂಗಳೂರು ನಗರ ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

Share with Friends
author avatar
News Desk