BlogLatestTop Storiesರಾಜ್ಯ-Karnataka

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ಕ್ಕೆ ಚಾಮುಂಡಿ ಬೆಟ್ಟದಲ್ಲಿ ಗುರುವಾರ ಬೆಳಗ್ಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಶ್ರೀಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ನಾಡೋಜ, ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಪುಷ್ಪಾರ್ಚನೆ ಮಾಡುವ ಮೂಲಕ ನವರಾತ್ರಿ ಉತ್ಸವವನ್ನು ಉದ್ಘಾಟಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಸಂಪುಟದ ಸಹೋದ್ಯೋಗಿಗಳು ಮೈಸೂರಿನಿಂದ ಕೆಎಸ್ಸಾರ್ಟಿಸಿ ಐರಾವತ ಬಸ್ ನಲ್ಲಿ ಆಗಮಿಸಿದರು. ಮುಖ್ಯಮಂತ್ರಿ ಸೇರಿದಂತೆ ಸಚಿವ ಸಂಪುಟದ ತಂಡಕ್ಕೂ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದಿಂದ ಪೂರ್ಣ ಕುಂಭ ಸ್ವಾಗತ ನೀಡಲಾಯಿತು.

ಇಂದಿನಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದ್ದು, ಅಕ್ಟೋಬರ್ 12ರ ಶನಿವಾರ ಜಂಬೂ ಸವಾರಿ ನಡೆಯಲಿದೆ. ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ (ಜಂಬೂ ಸವಾರಿ)ಗೆ ಚಾಲನೆ ದೊರೆಯಲಿದೆ. ಸಂಜೆ 7ಗಂಟೆಗೆ ಬನ್ನಿಮಂಟಪ ಆವರಣದಲ್ಲಿ ಪಂಜಿನ ಕವಾಯತು ನಡೆಯಲಿದೆ. ಪಂಜಿನ ಕವಾಯತ್ ನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಲಿದ್ದಾರೆ. ಅಂದು ದಸರಾ ಉದ್ಘಾಟನೆ, ವಸ್ತುಪ್ರದರ್ಶನ, ದಸರಾ ಕ್ರೀಡಾ ಉತ್ಸವ ಉದ್ಘಾಟನೆ, ಕುಸ್ತಿ ಪಂದ್ಯಾವಳಿ, ಸಾಂಸ್ಕೃತಿಕ ಕಾರ್ಯಕ್ರಮ, ಸಿನಿಮೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು.

https://sampoornanews.in/%e0%b2%ae%e0%b3%88%e0%b2%b8%e0%b3%82%e0%b2%b0%e0%b3%81-%e0%b2%a6%e0%b2%b8%e0%b2%b0%e0%b2%be-%e0%b2%89%e0%b2%a6%e0%b3%8d%e0%b2%98%e0%b2%be%e0%b2%9f%e0%b2%bf%e0%b2%b8%e0%b2%bf%e0%b2%a6-%e0%b2%b8/

ಇಂದಿನಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದೆ. ಅಕ್ಟೋಬರ್ 12ರ ಶನಿವಾರ ಜಂಬೂ ಸವಾರಿ ನಡೆಯಲಿದೆ. ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ ಜಂಬೂ ಸವಾರಿಗೆ ಚಾಲನೆ ದೊರೆಯಲಿದೆ.ಸಂಜೆ 7ಗಂಟೆಗೆ ಬನ್ನಿಮಂಟಪ ಆವರಣದಲ್ಲಿ ಪಂಜಿನ ಕವಾಯತು ನಡೆಯಲಿದೆ. ಪಂಜಿನ ಕವಾಯತ್ ನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ.ಇನ್ನು ಯುವ ದಸರಾವನ್ನು ಮಾನಸಗಂಗೋತ್ರಿ ವಿಶ್ವವಿದ್ಯಾಲಯದ ಮುಕ್ತ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

Share with Friends
author avatar
News Desk