Blogರಾಷ್ಟ್ರೀಯ-National

ಪಿಎಂ ಕಿಸಾನ್ ಸಮ್ಮಾನ್ ನಿಧಿಯ 18ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ದೆಹಲಿ: ಮಹಾರಾಷ್ಟ್ರದ ವಾಶಿಮ್‌ನಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18ನೇ ಕಂತನ್ನು ಬಿಡುಗಡೆ ಮಾಡಿದರು. ಈ ಮೂಲಕ 9.4 ಕೋಟಿ ರೈತರಿಗೆ 20,000 ಕೋಟಿ ರೂ. ಹಣ ಜಮೆ ಆಗಲಿದೆ.

ಬಿಡುಗಡೆಯ ದಿನವನ್ನು PM-KISAN Utsav Divas ಎಂದು ಆಚರಿಸುವ ವಿಶೇಷ ಕಾರ್ಯಕ್ರಮಗಳನ್ನು ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆಯೋಜಿಸಲಾಗಿದೆ.

732 ಕೃಷಿ ವಿಜ್ಞಾನ ಕೇಂದ್ರಗಳು (ಕೆವಿಕೆಗಳು), 1 ಲಕ್ಷಕ್ಕೂ ಹೆಚ್ಚು ಪ್ರಾಥಮಿಕ ಕೃಷಿ ಸಹಕಾರ ಸಂಘಗಳು ಮತ್ತು ವೆಬ್‌ಕಾಸ್ಟ್ ಮೂಲಕ ದೇಶಾದ್ಯಂತ 5 ಲಕ್ಷ ಸಾಮಾನ್ಯ ಸೇವಾ ಕೇಂದ್ರಗಳು ಸೇರಿದಂತೆ ಸುಮಾರು 2.5 ಕೋಟಿ ರೈತರು ಈ ಕಾರ್ಯಕ್ರಮದಲ್ಲಿ ಸೇರಿದ್ದಾರೆ.

ಈ ಸಂದರ್ಭದಲ್ಲಿ ಮಹಾರಾಷ್ಟ್ರದ ರಾಜ್ಯಪಾಲರಾದ ಸಿ.ಪಿ. ರಾಧಾಕೃಷ್ಣನ್, ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್, ರಾಜೀವ್ ರಂಜನ್ ಸಿಂಗ್, ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿಗಳಾದ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವಿಸ್ ಮುಂತಾದವರು ಉಪಸ್ಥಿತರಿದ್ದರು.

Share with Friends
author avatar
News Desk