BlogLatestTop Storiesರಾಜ್ಯ-Karnataka

ಮೂಡಾ ಹಗರಣ : ಲೋಕಾಯುಕ್ತ ಪೊಲೀಸರೆದುರು ಮಲ್ಲಿಕಾರ್ಜುನ ಹಾಗೂ ದೇವರಾಜು ಹಾಜರು

ಮೈಸೂರು : ಲೋಕಾಯುಕ್ತ ಪೊಲೀಸರು ಮೂಡಾ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಇಂದು ಪ್ರಕರಣದ ಎ 3 ಹಾಗೂ ಎ 4 ಆರೋಪಿಗಳು ವಿಚಾರಣೆಗೆ ಹಾಜರಾಗಿದ್ದಾರೆ.ಲೋಕಾಯುಕ್ತ ಅಧಿಕಾರಿಗಳು ಮೂಡಾ ಪ್ರಕರಣದ ಎ3 ಆರೋಪಿ ಮಲ್ಲಿಕಾರ್ಜುನ ಹಾಗೂ ಎ4 ಆರೋಪಿ ದೇವರಾಜು ಅವರಿಗೆ ನೋಟಿಸ್ ನೀಡಿ ಅ. 10ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಮಲ್ಲಿಕಾರ್ಜುನ ಮತ್ತು ದೇವರಾಜು ನಗರದಲ್ಲಿರುವ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು ದೂರುದಾರ ಸ್ನೇಹಮಯಿ ಕೃಷ್ಣ ಅವರ ವಿಚಾರಣೆಯನ್ನು ನಡೆಸಿದ್ದಾರೆ.

ಮೈಸೂರಿನ ಕೆಸರೇ ಗ್ರಾಮಕ್ಕೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರಿಗೆ ನಗರದ ವಿಜಯನಗರದಲ್ಲಿ ನೀಡಲಾಗಿರುವ 14 ಸೈಟ್ ಇರುವ ಸ್ಥಳಕ್ಕೂ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

ಮೂಡಾ ಪ್ರಕರಣದ ತನಿಖೆಯನ್ನು ನಡೆಸಿ ಡಿಸೆಂಬರ್ ಒಳಗೆ ಮಾಹಿತಿ ನೀಡುವಂತೆ ನ್ಯಾಯಾಲಯ ಸೂಚಿಸಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎ1 ಆರೋಪಿ ಮತ್ತು ಅವರ ಪತ್ನಿ ಪಾರ್ವತಿ ಎ 2 ಆರೋಪಿ ಆಗಿದ್ದಾರೆ. ಇವರಿಬ್ಬರಿಗೂ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿ ಯಾವ ರೀತಿ ವಿಚಾರಣೆ ನಡೆಸಲಿದ್ದಾರೆಯೇ ಎಂಬುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.

Share with Friends
author avatar
News Desk