BlogTop Storiesರಾಷ್ಟ್ರೀಯ-National

ಮಾಜಿ ಸಚಿವ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದ ಮೂರನೇ ಆರೋಪಿ ಬಂಧನ

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಭಾನುವಾರ ರಾತ್ರಿ ಪುಣೆ ಮೂಲದ ಆರೋಪಿ ಒಬ್ಬನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪ್ರವೀಣ್ ಲೋಂಕರ್ (28) ಎಂದು ಗುರುತಿಸಲಾಗಿದೆ. ಈತ ಬಾಬಾ ಸಿದ್ದಿಕಿ ಹತ್ಯೆಯಲ್ಲಿ ಸಂಚುಕೋರ ಎನ್ನಲಾಗಿದೆ.

ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಇಬ್ಬರು ಆರೋಪಿಗಳನ್ನು ಈಗಾಗಲೇ ಬಂಧಿಸಿದ್ದರು. ಬಂಧಿತರನ್ನು ಹರಿಯಾಣದ ಗುರ್ಮೈಲ್ ಬಲ್ಜಿತ್ ಸಿಂಗ್ (23) ಮತ್ತು ಉತ್ತರ ಪ್ರದೇಶದ ಧರ್ಮರಾಜ್ ರಾಜೇಶ್ ಕಶ್ಯಪ್ (19) ಎಂದು ಗುರುತಿಸಲಾಗಿತ್ತು.

ಬಂಧಿತ ಆರೋಪಿಗಳಿಂದ ಎರಡು ಪಿಸ್ತೂಲ್ ಗಳು ಮತ್ತು 28 ಸಜೀವ ಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

ಮೂವರು ಶೂಟರ್ ಗಳ ಪೈಕಿ ಈತ ತನ್ನ ಸಹೋದರನೊಂದಿಗೆ ಸೇರಿಕೊಂಡು ಹತ್ಯೆಗೆ ಸಂಚು ರೂಪಿಸಿದ್ದ ಎಂದು ಆರೋಪಿಸಲಾಗಿದೆ.ಪೊಲೀಸರು ತಲೆಮರೆಸಿಕೊಂಡಿರುವ ಈತನ ಸಹೋದರ ಶುಭಂ ಲೋಂಕರ್ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Share with Friends
author avatar
News Desk