BlogLatestTop Storiesರಾಷ್ಟ್ರೀಯ-National

ಬುಧವಾರ(ಅ.16) ಜಮ್ಮು & ಕಾಶ್ಮೀರದ ನೂತನ ಸಿಎಂ ಆಗಿ ಒಮರ್ ಅಬ್ದುಲ್ಲಾ ಪ್ರಮಾಣ

ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು ಅ. 16ರಂದು ಜಮ್ಮು ಮತ್ತು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿಂಗ್ ಅವರು ಸೋಮವಾರ(ಅಕ್ಟೋಬರ್​ 14) ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರನ್ನು ಅಕ್ಟೋಬರ್ 16 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ.

ಒಮರ್ ಅಬ್ದುಲ್ಲಾ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸುವ ಪತ್ರವನ್ನು ಅಕ್ಟೋಬರ್ 11ರಂದು ಜೆಕೆಎನ್‌ಸಿ ಅಧ್ಯಕ್ಷ ಡಾ. ಫಾರೂಕ್ ಅಬ್ದುಲ್ಲಾ ಅವರಿಂದ ಸ್ವೀಕರಿಸಿರುವುದಾಗಿ ಲೆಫ್ಟಿನೆಂಟ್ ಗವರ್ನರ್​​ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್​​ ಕಾಂಗ್ರೆಸ್ ಮೈತ್ರಿಕೂಟ ಜಯಗಳಿಸಿದೆ. ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಅವರು ಮೈತ್ರಿಕೂಟದ ನಾಯಕರಾಗಿ ಆಯ್ಕೆಯಾಗಿದ್ದಾರೆ.

Share with Friends
author avatar
News Desk