BlogLatestTop Storiesರಾಷ್ಟ್ರೀಯ-National

ಅಧಿಕೃತವಾಗಿ ರಾಜಕೀಯ ಅಖಾಡಕ್ಕಿಳಿದ ಪ್ರಿಯಾಂಕಾ ಗಾಂಧಿ, ವಯನಾಡ್‌ನಿಂದ ಲೋಕಸಭೆಗೆ ಸ್ಪರ್ಧೆ

ನವದೆಹಲಿ : ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನವೆಂಬರ್ 13ರಂದು ನಡೆಯಲಿದೆ ಎಂದು ಚುನಾವಣಾ ಆಯೋ ಗ ಇಂದು (ಬುಧವಾರ) ಪ್ರಕಟಿಸಿದೆ. ಇದರ ಬೆನ್ನಲ್ಲೇ ವಯನಾಡ್ ಲೋಕಸಭಾ ಕ್ಷೇ ತ್ರದಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.

ಇದರೊಂದಿಗೆ ಲೋಕಸಭೆ ವಿರೋ ಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ರಾಜೀ ನಾಮೆಯಿಂದ
ತೆರವಾಗಿರುವ ವಯನಾಡ್ ಕ್ಷೇ ತ್ರದಲ್ಲಿ ಮತ್ತೊಂದು ಚುನಾವಣೆಗೆ ವೇದಿಕೆ ಸಜ್ಜಾಗಿದೆ.

2024ರ ಲೋಕಸಭೆ ಚುನಾವಣೆಯಲ್ಲಿ ರಾಯ್ಬರೇಲಿ ಹಾಗೂ ವಯನಾಡ್ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ರಾಹುಲ್,
ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರು. ಬಳಿಕ ವಯನಾಡ್ ಕ್ಷೇತ್ರವನ್ನು ಬಿಟ್ಟುಕೊಡಲು ನಿರ್ಧರಿಸಿದ್ದರು.

ವಯನಾಡ್ ಕ್ಷೇ ತ್ರದಿಂದ ರಾಹುಲ್ ಗಾಂಧಿ ಅವರ ತಂಗಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂದು ಕಾಂ ಗ್ರೆಸ್
ಈಗಾಗಲೇ ಘೋ ಷಿಸಿದೆ. ಇದರೊಂದಿಗೆ ಪ್ರಿಯಾಂಕಾ ಗಾಂಧಿ ತಮ್ಮ ಚೊಚ್ಚಲ ಚುನಾವಣೆಗೆ ಸಿದ್ಧರಾಗಿದ್ದಾರೆ .

52 ವರ್ಷದ ಪ್ರಿಯಾಂಕಾ, ವಯನಾಡ್ಮೂಲಕ ಚುನಾವಣಾ ಅಖಾಡಕ್ಕೆ ಧುಮುಕುತ್ತಿದ್ದಾರೆ. ವಯನಾಡ್ನಲ್ಲಿ
ಪ್ರಿಯಾಂಕಾ ಗೆಲುವು ಸಾಧ್ಯವಾದರೆ, ಗಾಂಧಿ ಕುಟುಂಬದಿಂ ಮೂವರು ಸಂಸತ್ತಿಗೆ ಪ್ರವೇ ಶಿಸಲಿದ್ದಾರೆ. ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜಸಭೆಗೆ ಆಯ್ಕೆಯಾಗಿದ್ದರು.

ಇದರೊಂದಿಗೆ ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದಿಂದ ರಾಹುಲ್ ಗಾಂಧಿ ಕೂಟತ್ತಿಲ್ ಹಾಗೂ ಚೆಲ್ಲಕ್ಕಾರ ಮೀಸಲು ಕ್ಷೇತ್ರಕ್ಕೆ ರಮ್ಯಾ ಹರಿದಾಸ ಅವರ ಹೆಸರನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜು ನ ಖರ್ಗೆ ಅಂತಿಮಗೊಳಿಸಿದ್ದಾರೆ ಎಂದು ಪ್ರಧಾನ ಕಾರ್ಯ ದರ್ಶಿ ಕೆ.ಸಿ. ವೇಣುಗೋಪಾಲ್ ಪಟ್ಟಿ ಪ್ರಕಟಿಸಿದ್ದಾರೆ.

Share with Friends
author avatar
News Desk