BlogLatestರಾಜ್ಯ-Karnataka

ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥರ

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. “ವೈದ್ಯರು ಆರೋಗ್ಯ ತಪಾಸಣೆ ಮಾಡಿದ್ದು, ಸದ್ಯ ಎಸ್. ಎಂ. ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದೆ. ಸೋಮವಾರ ಡಿಸ್ಚಾರ್ಜ್ ಆಗುವ ನಿರೀಕ್ಷೆಯಿದೆ” ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ಡಾ.ಸತ್ಯನಾರಾಯಣ ಹಾಗೂ ಡಾ. ಸುನೀ ಲ್ ಕಾರಂತ ನೇತೃತ್ವದ ವೈ ದ್ಯರ ತಂಡವು ಅವರಿಗೆ ಚಿಕಿತ್ಸೆ ಒದಗಿಸುತ್ತಿದೆ. ಅವರ ಆರೋ ಗ್ಯ ಸ್ಥಿರವಾಗಿದ್ದು, ಮನೆಗೆ ಸೋ ಮವಾರ ತೆರಳಲಿದ್ದಾರೆ ಎಂದು ಆಸ್ಪತ್ರೆಯ
ಮೂಲಗಳು ತಿಳಿಸಿವೆ.

ಕೆಲ ತಿಂಗಳ ಹಿಂದೆ ಶ್ವಾಸಕೋ ಶದ ಸೋಂಕಿನಿಂದಾಗಿ ಉಸಿರಾಟದ ಸಮಸ್ಯೆ ಎದುರಿಸಿದ್ದ ಅವರು, ನಿರಂತರ ನಾಲ್ಕು ತಿಂಗಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು, ಆಗಸ್ಟ್ 28ರಂ ದು ಮಣಿಪಾಲ್ ಆಸ್ಪತ್ರೆಯಿಂದ ಮನೆಗೆ
ತೆರಳಿದ್ದರು.

92 ವರ್ಷದ ಎಸ್​ಎಮ್​​ ಕೃಷ್ಣ ಅವರಿಗೆ ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ಸತ್ಯನಾರಾಯಣ ಹಾಗೂ ಸನಿಲ್​ ಕಾರಂತ್​ ನೇತೃತ್ವದಲ್ಲಿ ಮಾಜಿ ವಿದೇಶಾಂಗ ಸಚಿವ ಎಸ್​ಎಂ ಕೃಷ್ಣ ಅವರಿಗೆ ಚಿಕಿತ್ಸೆ ಮುಂದುವರೆದಿದೆ.

Share with Friends
author avatar
News Desk