ಉಡುಪಿ ಜಿಲ್ಲೆಯಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಎನ್ಕೌಂಟರ್
ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಸೀತಂಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತನಾಗಿದ್ದಾನೆ.
ಕಾರ್ಕಳ, ಹೆಬ್ರಿ ಪರಿಸರದಲ್ಲಿ ಕೆಲದಿನಗಳಿಂದ ನಕ್ಸಲ್ ಓಡಾಟ ಪತ್ರೆಯಾಗಿತ್ತು. ಈ ಹಿನ್ನಲೆಯಲ್ಲಿ ಎಎನ್ ಎಫ್ ಕೂಂಬಿಂಗ್ ಬಿಗಿಗೊಳಿಸಿತ್ತು. ಸೋಮವಾರ ರಾತ್ರಿ 5 ಮಂದಿ ನಕ್ಸಲರ ತಂಡ ಸೀತಂಬೈಲು ಸಮೀಪ ರೇಷನ್ ಸಂಗ್ರಹಕ್ಕೆ ಬಂದಾಗ ಎಎನ್ ಎಫ್ ತಂಡ ಕಾರ್ಯಾಚರಣೆ ನಡೆಸಿದೆ. ಈ ವೇಳೆ ದಾಳಿ-ಪ್ರತಿದಾಳಿ ನಡೆದಿದ್ದು, ದಾಳಿಗೆ ಸಿಲುಕಿ ವಿಕ್ರಂ ಗೌಡ ಬಲಿಯಾಗಿದ್ಸಾನೆ. ಉಳಿದ ನಾಲ್ವರು ಕಾಡಿನ ಹಾದಿಯಲ್ಲಿ ಪರಾರಿಯಾಗಿದ್ದಾರೆ. ಎಎನ್ ಎಫ್ಕೂಂಬಿಂಗ್ ಮುಂದುವರಿಸಿದ್ದು, ಇನ್ನುಳಿದವರಿಗಾಗಿ ಶೋಧ ನಡೆಸುತ್ತಿದೆ
ಕರ್ನಾಟಕದ ಪಶ್ಚಿಮ ಘಟ್ಟ ತಪ್ಪಲಿನ ಅರಣ್ಯದಂಚಿನ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ತೀವ್ರಗೊಂಡಿದ್ದು, ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆಯಲ್ಲಿ ಎನ್ಕೌಂಟರ್ ನಡೆದಿದೆ. ನಕ್ಸಲ್ ನಾಯಕ ವಿಕ್ರಂ ಗೌಡ ಎಂಬಾತನನ್ನು ನಕ್ಸಲ್ ನಿಗ್ರಹ ಪಡೆ ಹತ್ಯೆ ಮಾಡಿದೆ. ನಕ್ಸಲ್ ನಾಯಕ ವಿಕ್ರಂ ಗೌಡ ಕಬ್ಬಿನಾಲೆ ಮೂಲದವನಾಗಿದ್ದಾನೆ.
ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯ ದಟ್ಟಾರಣ್ಯದಲ್ಲಿ, ಅರಣ್ಯದಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿರುವ ಕಾರಣ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿತ್ತು.
ಕಬ್ಬಿನಾಲೆ ಅರಣ್ಯದಲ್ಲಿ ನಡೆದ ಎನ್ಕೌಂಟರ್ನೊಂದಿಗೆ ಉಡುಪಿ ಭಾಗದಲ್ಲಿ 13 ವರ್ಷಗಳ ನಂತರ ಗುಂಡಿನ ಮೊರತೆ ಕೇಳಿದಂತಾಗಿದೆ. ಸೋಮವಾರ ರಾತ್ರಿ ಐದು ಮಂದಿ ಇದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ಅಷ್ಟರಲ್ಲಿ ನಕ್ಸಲರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಎನ್ಕೌಂಟರ್ನಲ್ಲಿ ವಿಕ್ರಂ ಗೌಡ ಹತನಾದರೆ, ಉಳಿದ ನಕ್ಸಲರು ಪರಾರಿಯಾಗಿದ್ದಾರೆ.
