BlogLatestರಾಜ್ಯ-Karnataka

ಬಳ್ಳಾರಿಯಲ್ಲಿ ಬಾಣಂತಿಯರ ಸಾವು, ಸರ್ಕಾರದ ವಿರುದ್ಧ ಆರ್​.ಅಶೋಕ್​ ಆಕ್ರೋಶ

ಬೆಂಗಳೂರು : ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಕಳೆದ 15 ದಿನಗಳಲ್ಲಿ ಒಟ್ಟು ಐವರು ಬಾಣಂತಿಯರು ಮೃತಪಟ್ಟ ಕುರಿತು ತನಿಖಾ ಸಮಿತಿ ವರದಿಯನ್ನು ಸರ್ಕಾರ ಗೌಪ್ಯವಾಗಿಟ್ಟಿದೆ ಎಂದು ವಿಪಕ್ಷ ನಾಯಕ ಆರ್​.ಅಶೋಕ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿಯ ಜಿಲ್ಲಾಸ್ಪತ್ರೆ ಹಾಗು ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ 10 ದಿನಗಳಲ್ಲಿ 5 ಮಂದಿ ಬಾಣಂತಿಯರ ಸಾವಾಗಿದ್ದು, ಈ ಬಗ್ಗೆ ತಜ್ಞರ ತಂಡ ತನಿಖೆ ಮಾಡಿ ನೀಡಿರುವ ವರದಿಯನ್ನ ಕರ್ನಾಟಕ ಸರ್ಕಾರ ಗೌಪ್ಯವಾಗಿ ಮುಚ್ಚಿಟ್ಟಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.” ಎಂದು ಆರ್ ಅಶೋಕ್​ ಟ್ವಿಟ್​ ಮಾಡಿದ್ದಾರೆ.

“ಬಳ್ಳಾರಿಯಲ್ಲಿ ಸಂಭವಿಸಿರುವ ಬಾಣಂತಿಯರ ಸಾವಿಗೂ ಈ ಸುತ್ತೋಲೆಗೂ ಏನಾದರೂ ಸಂಬಂಧವಿದೆಯೇ? ಈ ಕಳಪೆ ಗುಣಮಟ್ಟದ ಔಷಧಿ ಪೂರೈಕೆಗೆ, ಬಳಕೆಗೆ ಹೊಣೆ ಯಾರು? ಸರ್ಕಾರ ವರದಿಯನ್ನ ಮುಚ್ಚಿಡುವ ಮೂಲಕ ಯಾರನ್ನು ರಕ್ಷಿಸುತ್ತಿದೆ?”

“ಇಡೀ ಕರ್ನಾಟಕವೇ ಬೆಚ್ಚಿ ಬೀಳುವ ಇಂತಹ ಆಘಾತಕಾರಿ ಘಟನೆ ನಡೆದಿದ್ದರೂ ಸಿಎಂ ಸಿದ್ದರಾಮಯ್ಯ ಅವರಾಗಲಿ, ಡಿಸಿಎಂ ಡಿಕೆ ಶಿವಕುಮಾರ್​ ಅವರಾಗಲಿ ಇದರ ಬಗ್ಗೆ ಕ್ರಮ ಕೈಗೊಳ್ಳುವುದಿರಲಿ, ಕನಿಷ್ಠ ಪಕ್ಷ ಸಂತಾಪ ಕೂಡ ಸೂಚಿಸಿಲ್ಲ. ಇನ್ನು ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್​ ಅಹ್ಮದ್​ ಖಾನ್​ ಅವರು ಈವರೆಗೂ ಜಿಲ್ಲೆಗೆ ಭೇಟಿ ನೀಡುವ ಗೋಜಿಗೂ ಹೋಗಿಲ್ಲ.”

“ಈ ಪ್ರಕರಣದ ನೈತಿಕೆ ಹೊಣೆ ಹೊತ್ತು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್​ ಅವರು ಕೂಡಲೇ ರಾಜೀನಾಮೆ ನೀಡಬೇಕು. ಈ ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರನ್ನ ಒತ್ತಾಯಿಸುತ್ತೇನೆ.” ಎಂದಿದ್ದಾರೆ.

Share with Friends
author avatar
News Desk