BlogEntertainmentLatestರಾಜ್ಯ-Karnatakaಸ್ಯಾಂಡಲ್​ವುಡ್-Sandalwood

ಸಚಿವ ಜಮೀ‌ರ್ ಅಹಮದ್ ಪುತ್ರನ `ಕಲ್ಟ್’ ಚಿತ್ರದ ಡೋನ್ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಸಚಿವ ಜಮೀ‌ರ್ ಖಾನ್ ಪುತ್ರ ಜೈದ್ ಖಾನ್ ನಟನೆಯ ಕಲ್ಟ್ ಚಿತ್ರದ ಡೋನ್ ಟೆಕ್ನಿಷಿಯನ್ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಲ್ಟ್ ಚಿತ್ರದ ಪ್ರತಿ ದಿನದ ಶೂಟ್‌ಗೆ 25 ಸಾವಿರ ನಿಗದಿಪಡಿಸಿ ಡೋನ್ ಟೆಕ್ನಿಶಿಯನ್ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಸುತ್ತಿದ್ದಾಗ ಡೋನ್ ತುಂಡಾಗಿದೆ. ಆದರೆ ಚಿತ್ರದ ನಾಯಕ ಜೈದ್ ಖಾನ್ ಹಾಗೂ ನಿರ್ದೇಶಕ ಯಾವುದೇ ನಷ್ಟ ಭರಿಸಲಿಲ್ಲ ಎಂದು ಆರೋಪ ಮಾಡಿದ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಶೂಟಿಂಗ್ ವೇಳೆ ವಿಂಡ್ ಫ್ಯಾನ್​ಗೆ ಟಚ್ ಆಗಿ ಡ್ರೋನ್ ತುಂಡಾಗಿತ್ತು. ಇದಾದ ಬಳಿಕ ಸಂತೋಷ್​ಗೆ ಚಿತ್ರತಂಡ ಕೊಂಚವೂ ನಷ್ಟ ತುಂಬಿ ಕೊಟ್ಟಿರಲಿಲ್ಲ. ಈ ಬಗ್ಗೆ ಅವರು ತಂಡದ ಬಳಿ ಕೇಳಿಕೊಂಡಿದ್ದರು. ಈ ವೇಳೆ ನಷ್ಟ ಪರಿಹಾರ ಮಾಡದೆ ಒಂದೂವರೆ ಲಕ್ಷ ರೂಪಾಯಿ ಬೆಲೆಯ ಮೆಮೊರಿ ಕಾರ್ಡ್​ ಕಿತ್ತುಕೊಂಡಿರುವ ಆರೋಪವನ್ನು ಸಂತೋಷ್ ಮಾಡಿದ್ದಾರೆ.

ಇದರಿಂದ ಮನನೊಂದು ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಸದ್ಯ ಮಾಗಡಿ ರೋಡ್ ಠಾಣೆಗೆ ಸಂತೋಷ್ ಸಹೋದರಿ ದೂರು ನೀಡಿದ್ದಾರೆ. ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಮಂಗಳವಾರ ವಿಚಾರಣೆಗೆ ಬರುವಂತೆ ಚಿತ್ರತಂಡಕ್ಕೆ ಪೊಲೀಸರು ಸೂಚನೆ ನೀಡಿದ್ದಾರೆ. ವಿಚಾರಣೆ ವೇಳೆ ಘಟನೆ ಬಗ್ಗೆ ವಿವರವಾಗಿ ತಂಡದವರು ಮಾಹಿತಿ ಪಡೆಯಲಿದ್ದಾರೆ. ವಿಚಾರಣೆಯ ಬಳಿಕ ಪೊಲೀಸರು ಮುಂದಿನ ಕ್ರಮದ ಬಗ್ಗೆ ನಿರ್ಧಾರ ಮಾಡಲಿದ್ದಾರೆ.

Share with Friends
author avatar
News Desk