BlogEntertainmentLatestಸ್ಯಾಂಡಲ್​ವುಡ್-Sandalwood

ಕೀನ್ಯಾದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಸ್ಯಾಂಡಲ್ವುಡ್‌ ಕ್ವಿನ್‌ ನಟಿ ರಮ್ಯಾ

ಅಭಿನಯದಿಂದ ದೂರ ಉಳಿದಿರುವ ಸ್ಯಾಂಡಲ್ವುಡ್‌ ಕ್ವಿನ್‌ ರಮ್ಯಾ ತಮ್ಮ ಜನ್ಮದಿನವನ್ನು ಕೀನ್ಯಾದ ರಾಷ್ಟ್ರೀಯ ಮೀಸಲು ಪ್ರದೇಶದಲ್ಲಿ ಆಚರಿಸಿಕೊಂಡಿದ್ದಾರೆ. ಸದ್ಯ ಬರ್ಥ್‌ ಡೇ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ರಮ್ಯಾ ಗೆಳೆಯ ಸಂಜೀವ್ ಮೋಹನ್ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ರಮ್ಯಾ ಕೀನ್ಯಾದ ಮಸಾಯಿ ಮಾರ ರಾಷ್ಟ್ರೀಯ ಮೀಸಲು ಭಾಗದಲ್ಲಿ ಗೆಳೆಯರ ಜೊತೆ ಈ ಭಾಗದಲ್ಲಿ ಸುತ್ತಾಟ ನಡೆಸಿ ಜನ್ಮದಿನ ಆಚರಿಸಿಕೊಂಡಿದ್ದಾರೆ. ಪ್ರತಿ ಬಾರಿ ಜನ್ಮದಿನಕ್ಕೆ ಅವರು ನಾನಾ ಕಡೆಗಳಲ್ಲಿ ಸುತ್ತಾಟ ನಡೆಸುತ್ತಾರೆ,

ರಮ್ಯಾ ಅವರ ಆಪ್ತ ಸಂಜೀವ್ ಮೋಹನ್ ಎಂಬುವವರು ಅವರ ಫೋಟೋನ ಪೋಸ್ಟ್ ಮಾಡಿದ್ದಾರೆ. ರಮ್ಯಾ ಅವರಿಗೆ ಸಂಜೀವ್ ಜೊತೆ ಒಳ್ಳೆಯ ಗೆಳೆತನ ಇದೆ. ಈ ಮೊದಲಿನಿಂದಲೂ ಸಂಜೀವ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ರಮ್ಯಾ ಫೋಟೋಗಳನ್ನು ಹಂಚಿಕೊಳ್ಳುತ್ತಾ ಬರುತ್ತಿದ್ದಾರೆ. ಈಗ ಹಂಚಿಕೊಂಡಿರೋ ಫೋಟೋ ಗಮನ ಸೆಳೆದಿದೆ.

‘ಹ್ಯಾಪಿ ಬರ್ತ್​ಡೇ ದಿವು. ಯಾವಾಗಲೂ ಪ್ರೀತಿಸುತ್ತೇನೆ. ನಿಮ್ಮ ಜೊತೆ ಇರೋದು ಯಾವಾಗಲೂ ಸುಂದರವಾಗಿರುತ್ತದೆ’ ಎಂದು ಸಂಜೀವ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್​ಗೆ ಮಸಾಯಿ ಮಾರ, ಕೀನ್ಯಾ ಎಂದು ಲೊಕೇಶನ್ ನೀಡಿದ್ದಾರೆ. ಸದ್ಯ ಸಂಜೀವ್ ಅವರು ಕೀನ್ಯಾದಲ್ಲಿಯೇ ಇದ್ದಾರೆ. ಮಸಾಯಿ ಮಾರದಲ್ಲಿರುವ ಫೋಟೋಗಳನ್ನು ಸ್ಟೇಟಸ್​ನಲ್ಲಿ ಹಂಚಿಕೊಳ್ಳುತ್ತಾ ಇದ್ದಾರೆ.

Share with Friends
author avatar
News Desk