BlogLatestರಾಜಕೀಯ | Politicsರಾಜ್ಯ-Karnataka

ಯತ್ನಾಳ್ ಹೊರಗಿನವರಲ್ಲ, ನಮ್ಮವರೇ : ಯಡಿಯೂರಪ್ಪ

ಬೆಂಗಳೂರು: ಯತ್ನಾಳ್ ಹೊರಗಿನವರಲ್ಲ, ನಮ್ಮವರೇ. ಯಾವುದೋ ಕಾರಣಕ್ಕೆ ಅವರು ಹಾಗೆ ಮಾತನಾಡುತ್ತಿದ್ದಾರೆ. ಎಲ್ಲವನ್ನೂ ಹೈ ಕಮಾಂಡ್ ಕೂತು ಬಗೆಹರಿಸುತ್ತದೆ. ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಎಲ್ಲರೂ ಒಟ್ಟಾಗಿ ಪಕ್ಷವನ್ನು ಮುಂದೆ ತೆಗೆದುಕೊಂಡು ಹೋಗುತ್ತೇವೆ. ಏನೇ ಭಿನ್ನಾಭಿಪ್ರಾಯವಿದ್ದರೂ ಎದುರುಬದುರು ಕೂತು ಚರ್ಚಿಸಿ, ಒಟ್ಟಾಗಿ ಹೋಗುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಎಲ್ಲವೂ ಸರಿಯಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬರುವ ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯದ ವಿರುದ್ಧ ನಮ್ಮ ಶಾಸಕರು ಜಾಗೃತಿ ಮೂಡಿಸಲಿದ್ದಾರೆ. ಮುಡಾ ಹಗರಣದ ಬಗ್ಗೆ ಮಾಧ್ಯಮಗಳಲ್ಲಿ ಎಲ್ಲ ವಿವರಗಳು ಹೊರಗೆ ಬರುತ್ತಿವೆ ಎಂದು ಹೇಳಿದರು. ಈ ಮೂಲಕ ಬಿಎಸ್​ವೈ ಪರೋಕ್ಷವಾಗಿ ಯತ್ನಾಳ್ ದಾರಿಗೆ ಬರಲಿದ್ದಾರೆ ಎನ್ನುವ ಅರ್ಥದಲ್ಲಿ ಹೇಳಿದರು.

ಇಂದು ಶಿಸ್ತು ಸಮಿತಿ ಭೇಟಿಯಾದ ಬಳಿಕ ರೆಬೆಲ್ ಶಾಸಕ ಯತ್ನಾಳ್ ಸ್ವಲ್ಪ ಕೂಲ್ ಆಗಿರುವಂತೆ ಕಂಡುಬಂತು.

Share with Friends
author avatar
News Desk