BlogLatestTop Storiesರಾಜ್ಯ-Karnataka

ಅರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಅಕ್ಕಿ ಕಡಿತ ಮಾಡಲ್ಲ : ಸಿಎಂ

ಹಾವೇರಿ : ಅರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಯಾವುದೇ ಕಾರಣಕ್ಕೂ ಅಕ್ಕಿ ಕಡಿಮೆ ಮಾಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಸಾಧಿಸಿದ ಹಿನ್ನೆಲೆಯಲ್ಲಿ ಇಂದು ಹಾವೇರಿ ಜಿಲ್ಲೆಯ ಸವಣೂರಲ್ಲಿ ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಅವರು ಅರ್ಹ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಕಡಿಮೆ ಮಾಡಲ್ಲ. ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳಲ್ಲ. ಅರ್ಹ ಇರುವ ಎಲ್ಲರಿಗೂ ಅಕ್ಕಿ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ದೇಶದಲ್ಲಿ ನಮ್ಮ ರಾಜ್ಯದಲ್ಲಿ ಅಷ್ಟೇ 10 ಕೆಜಿ ಅಕ್ಕಿ ಕೊಡುತ್ತಿದ್ದೇವೆ. 5 ಕೆಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿಗೆ ತಗುಲುವ ಹಣ ಕೊಡುತ್ತಿದ್ದೇವೆ. ಕೇಂದ್ರ ಸರ್ಕಾರ ಅಕ್ಕಿ ಇಟ್ಟುಕೊಂಡು ಸಹ ಅಕ್ಕಿ ಕೊಡಲಿಲ್ಲ. ಬಿಜೆಪಿ ಅಧಿಕಾರ ಇರುವ ರಾಜ್ಯದಲ್ಲಿ 10 ಕೆಜಿ ಅಕ್ಕಿ ಕೊಡುತ್ತಾರಾ? ಬಿಜೆಪಿ 10 ಕೆಜಿ ಅಕ್ಕಿ ಕೊಡ್ದಿದ್ರೆ ರಾಜೀನಾಮೆ ಕೊಡುತ್ತೇನೆ ಎಂದು ಸವಾಲು ಹಾಕಿದರು.

ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದ್ದಾರೆ ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅರ್ಹ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಕಡಿಮೆ ಮಾಡಲ್ಲ. ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳಲ್ಲ ಅರ್ಹ ಇರುವ ಎಲ್ಲರಿಗೂ ಅಕ್ಕಿ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

Share with Friends
author avatar
News Desk