BlogLatestTop Storiesಕ್ರೀಡೆ-Sports

ಅಂತಾರಾಷ್ಟ್ರೀಯ ಕ್ರಿಕೆಟ್‌ ವಿದಾಯ ಹೇಳಿದ ಸ್ಪಿನ್ ಮಾಂತ್ರಿಕ ಆರ್‌.ಅಶ್ವಿನ್‌

ಗಬ್ಬಾ : ಟೀಂ ಇಂಡಿಯಾದ ಅತ್ಯಂತ ಅನುಭವಿ ಬೌಲರ್‌ಗಳಲ್ಲಿ ಒಬ್ಬರಾಗಿರುವ ಆರ್ ಅಶ್ವಿನ್ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ನಡೆದ ಮೂರನೇ ಟೆಸ್ಟ್‌ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡ ಬೆನ್ನಲ್ಲೇ ಅಶ್ವಿನ್‌ ನಿವೃತ್ತಿ ನಿರ್ಧಾರ ಪ್ರಕಟಿಸಿದರು.

ಟೀಮ್‌ ಇಂಡಿಯಾದ ಜೊತೆಗಿನ ಸುದೀರ್ಘ ಬಾಂಧವ್ಯವನ್ನು ಕಳೆದುಕೊಳ್ಳುತ್ತಿರುವುದಕ್ಕೆ ನನ್ನ ಮನಸ್ಸಿಗೆ ಸ್ವಲ್ಪಮಟ್ಟಿಗಿನ ನೋವಾಗಿದೆ. ಆದರೆ ಕ್ಲಬ್‌ ಕ್ರಿಕೆಟ್‌ ನಲ್ಲಿ ನಾನು ಮುಂದುವರೆಯುತ್ತೇನೆ’ ಎಂದು ಅಶ್ವಿನ್‌ ತಿಳಿಸಿದ್ದಾರೆ.

5 ಪಂದ್ಯಗಳ ಸರಣಿಗೆ ಅಶ್ವಿನ್‌ ಅಡಿಲೇಡ್‌ನಲ್ಲಿ ಕೊನೆಯ ಪಂದ್ಯ ಆಡಿದ್ದರು . ಮೂರನೇ ಟೆಸ್ಟ್‌ ಪಂದ್ಯಕ್ಕೆ ರವೀಂದ್ರ ಜಡೇಜಾ ಅವರನ್ನು ಆಯ್ಕೆ ಮಾಡಲಾಗಿತ್ತು. ಆಸ್ಟ್ರೇಲಿಯಾ ವಿರುದ್ಧ ಗಬ್ಬಾದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡ ಬೆನ್ನಲ್ಲೇ ಅನುಭವಿ ಸ್ಪಿನ್ನರ್‌ ಈ ನಿರ್ಧಾರ ತೆಗೆದುಕೊಳ್ಳುವ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ.

ಟೆಸ್ಟ್ ಕ್ರಿಕೆಟ್‌ ನಲ್ಲಿ ಕನ್ನಡಿಗ ಅನಿಲ್‌ ಕುಂಬ್ಳೆ ನಂತರ ಅತಿ ಹೆಚ್ಚು ವಿಕೆಟ್‌ ಪಡೆದ ಎರಡನೇ ಬೌಲರ್‌ ಆಗಿ ಗುರುತಿಸಿಕೊಂಡಿರುವ ಆರ್‌. ಅಶ್ವಿನ್‌ ಒಟ್ಟು 41ವಿಶ್ವ ಚಾಂಪಿಯನ್​​ಶಿಪ್ ಮ್ಯಾಚ್​ಗಳನ್ನು ಆಡಿದ್ದು 195 ವಿಕೆಟ್​ಗಳನ್ನು ಪಡೆದಿದ್ದಾರೆ. ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಆಟಗಾರರಾಗಿ ಅಶ್ವಿನ್ ದಾಖಲೆ ಬರೆದಿದ್ದಾರೆ. ಟೆಸ್ಟ್ ಕ್ರಿಕಟ್ ಆಚೆ 116 ಏಕ ದಿನ ಪಂದ್ಯಗಳನ್ನು ಅಶ್ವಿನ್ ಆಡಿದ್ದಾರೆ ಹಾಗೂ 65 ಟಿ20 ಪಂದ್ಯಗಳನ್ನು ಆಡಿದ್ದು ತಲಾ 156 ಮತ್ತು 72 ವಿಕೆಟ್​ಗಳನ್ನು ಕಬಳಿಸಿದ್ದಾರೆ.

Share with Friends
author avatar
News Desk