ರಾಜ್ಯ-Karnataka

ಸಿ.ಟಿ.ರವಿ ಮೇಲೆ ಹಲ್ಲೆಗೆತ್ನಿಸಿದ 10 ಜನರ ವಿರುದ್ಧ ಎಫ್‌ಐಆರ್

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯಸಿ.ಟಿ. ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಜನರ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ. ರವಿ ಅಸಂವಿಧಾನಿಕ ಪದ ಬಳಕೆ ಆರೋಪ ಕೇಳಿಬಂದ ಬಳಿಕ ಸುವರ್ಣ ವಿಧಾನಸೌಧದಲ್ಲಿ ಭಾರೀ ಹೈಡ್ರಾಮಾ ನಡೆದಿತ್ತು.

ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಶಾಸಕರ ವಿರುದ್ಧ ಪ್ರಕರಣ ಸಹ ದಾಖಲಾಗಿತ್ತು. ಬಳಿಕ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಸುವರ್ಣ ವಿಧಾನಸೌಧದೊಳಕ್ಕೆ ನುಗ್ಗಿ ಸಿ.ಟಿ. ರವಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದರು.

ಇದಕ್ಕೆ ಪ್ರತಿಯಾಗಿ ಸಿ.ಟಿ. ರವಿ ಅವರ ಪರವಾಗಿ ವಿಧಾನ ಪರಿಷತ್ ಬಿಜೆಪಿ ಸದಸ್ಯರಾದ ಎಸ್.ವಿ. ಸಂಕನೂರು, ಡಿ.ಎಸ್. ಅರುಣ, ಕಿಶೋರ್ ಅವರು ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮೀ ಅವರ ಮೂಲಕ ದೂರು ಸಲ್ಲಿಸಿದ್ದರು.

ಕಾರ್ಯದರ್ಶಿ ಅವರು ಪೋಸ್ಟ್ ಮೂಲಕ ಭಾನುವಾರ ರಾತ್ರಿ ಪೊಲೀಸ್ ಆಯುಕ್ತರ ಕಚೇರಿಗೆ ಲಿಖಿತ ದೂರಿನ ಪ್ರತಿ ರವಾನಿಸಿದ್ದರು. ಇದನ್ನು ಆಧರಿಸಿ 10 ಜನರ ವಿರುದ್ಧ ಹಿರೇಬಾಗೇವಾಡಿ ಠಾಣೆಯಲ್ಲಿ ದೂರು ದಾಖಲಾಗಿದೆ.

Share with Friends
author avatar
News Desk