BlogEntertainmentLatest

ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಕಿರುತೆರೆ ನಟ ಚರಿತ್ ಅರೆಸ್ಟ್

ಬೆಂಗಳೂರು : ಕನ್ನಡದ ‘ಮುದ್ದುಲಕ್ಷ್ಮಿ‌’ ಸೇರಿದಂತೆ ಹಲವು ಸೀರಿಯಲ್​ನಲ್ಲಿ ಚರಿತ್ ನಟಿಸಿದ್ದ ಕಿರುತೆರೆ ನಟ ಚರಿತ್ ಬಾಳಪ್ಪ ಅವರನ್ನು ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಪ್ರೀತಿಸುವ ನೆಪದಲ್ಲಿ ದೈಹಿಕ ಸಂಪರ್ಕಕ್ಕೆ ಒತ್ತಾಯ ಮಾಡಿದ್ದಾರೆ ಎಂದು ಯುವತಿಯೊಬ್ಬರು ಆರೋಪ ಮಾಡಿದ್ದಾರೆ. ಯುವತಿ ವಾಸ ಮಾಡುತ್ತಿದ್ದ ಮನೆಗೆ ಸಹಚರರ ಜೊತೆ ನುಗ್ಗಿದ ಚರಿತ್ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಅಷ್ಟಲ್ಲದೇ ಯುವತಿ ಬಳಿ ಹಣಕ್ಕೂ ಬೇಡಿಕೆ ಇಟ್ಟಿರುವ ಆರೋಪ ಇದೆ. ಹಣ ಕೊಡದಿದ್ದರೆ ಆಕೆಯ ಖಾಸಗಿ ಫೋಟೋ, ವಿಡಿಯೋ ಹರಿಬಿಡುವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

2017ರಲ್ಲಿ ನಟಿ ಮಂಜು ಜೊತೆ ಚರಿತ್​ ಬಾಳಪ್ಪ ಅವರಿಗೆ ವಿವಾಹ ಆಗಿತ್ತು. 2022ರ ಬಳಿಕ ಅವರ ಸಂಸಾರದಲ್ಲಿ ಬಿರುಕು ಮೂಡಿತ್ತು. ನಂತರ ಅವರಿಬ್ಬರು ನ್ಯಾಯಾಲಯದಲ್ಲಿ ವಿಚ್ಚೇದನ ಪಡೆದುಕೊಂಡಿದ್ದರು. ಕೋರ್ಟ್ ಆಜ್ಞೆಯಂತೆ ಡೈವರ್ಸ್ ಪರಿಹಾರ ಹಣಕ್ಕೆ ನೋಟಿಸ್ ಕಳಿಸಿದ್ದಕ್ಕೆ ಮಾಜಿ ಪತ್ನಿಗೆ ಬೆದರಿಕೆ ಹಾಕಿದ್ದಾರೆ ಎಂದು ಚರಿತ್ ಬಾಳಪ್ಪ ವಿರುದ್ಧ ಕಳೆದ ಜೂನ್ ತಿಂಗಳಲ್ಲಿ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿತ್ತು.

ಚರಿತ್ ವಿರುದ್ಧ ಲೈಂಗಿಕ ದೌರ್ಜನ್ಯ, ಹಲ್ಲೆ, ಕೊಲೆ ಬೆದರಿಕೆ ಆರೋಪಗಳು ಕೇಳಿಬಂದಿವೆ. ಯುವತಿ ನೀಡಿದ ದೂರಿನ ಅನ್ವಯ ಆರೋಪಿ ಚರಿತ್ ಬಾಳಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಂದಹಾಗೆ, ಚರಿತ್ ಅವರಿಗೆ ಈಗಾಗಲೇ ಮದುವೆಯಾಗಿ ವಿಚ್ಛೇದನ ಕೂಡ ಪಡೆದಿದ್ದಾರೆ. ಡಿವೋರ್ಸ್​ ನಂತರವೂ ಅವರು ಮಾಜಿ ಪತ್ನಿಯ ಜೊತೆ ಗಲಾಟೆ ಮಾಡಿಕೊಂಡಿದ್ದರು.

Share with Friends
author avatar
News Desk