ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಪಿನಾಕ’ ಟೀಸರ್ ಬಿಡುಗಡೆ
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಬಹುನಿರೀಕ್ಷಿತ ‘ಪಿನಾಕ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಗಣೇಶ್ ಅವರ ಹುಟ್ಟುಹಬ್ಬದ ಅಂಗವಾಗಿ ಖಾಸಗಿ ಶಾಲೆಯೊಂದರಲ್ಲಿ ಸಾವಿರಾರು ಮಕ್ಕಳ ಸಮ್ಮುಖದಲ್ಲಿ ಟೀಸರ್ ಅನಾವರಣಗೊಳಿಸಲಾಯಿತು.
ಟೀಸರ್ ಬಿಡುಗಡೆಯಾದ ತಕ್ಷಣವೇ ಸಾಮಾಜಿಕ ಜಾಲತಾಣಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಚಿತ್ರದಲ್ಲಿನ ಗಣೇಶ್ ಅವರ ಹೊಸ ಲುಕ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.
ಚಿತ್ರವನ್ನು ನೃತ್ಯ ನಿರ್ದೇಶಕ ಧನಂಜಯ್ ಮೊದಲ ಬಾರಿಗೆ ನಿರ್ದೇಶಿಸಿದ್ದು, ಪೀಪಲ್ ಮೀಡಿಯಾ ಫ್ಯಾಕ್ಟರಿ ಸಂಸ್ಥೆಯಡಿ ವಿಶ್ವಪ್ರಸಾದ್ ನಿರ್ಮಿಸಿದ್ದಾರೆ. ಚಿತ್ರದ ಕಥೆಯಲ್ಲಿ ಅಧ್ಯಾತ್ಮಿಕ ಅಂಶಗಳಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.
ಈ ವೇಳೆ ಮಾತನಾಡಿದ ಗಣೇಶ್, ‘ಪಿನಾಕ’ ಶಿವನ ಕುರಿತಾದ ಕಥೆಯಾಗಿದ್ದು, ಇಂತಹ ವಿಭಿನ್ನ ಚಿತ್ರದಲ್ಲಿ ನಟಿಸಿರುವುದು ಸಂತಸದ ವಿಷಯ ಎಂದು ಹೇಳಿದರು. ಚಿತ್ರದ ಕ್ಲೈಮ್ಯಾಕ್ಸ್ ವಿಶೇಷವಾಗಿದ್ದು, 12 ನಿಮಿಷಗಳ ದೃಶ್ಯಕ್ಕಾಗಿ 22 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ ಎಂದು ತಿಳಿಸಿದರು.
ಚಿತ್ರದಲ್ಲಿ ಅರ್ಚನಾ ಅಯ್ಯರ್ ನಾಯಕಿಯಾಗಿ ನಟಿಸಿದ್ದು, ರಂಗಾಯಣ ರಘು, **ಸಾಧು ಕೋಕಿಲ,
