
ರಾಜ್ಯದಲ್ಲಿ ಮುಂಗಾರು ಆರ್ಭಟ : 3 ದಿನ ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ
ಬೆಂಗಳೂರು,ಜು.9: ರಾಜ್ಯದಲ್ಲಿ ಮುಂಗಾರು ಮಳೆ ವ್ಯಾಪಕವಾಗಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲಭಾಗಗಳಲ್ಲಿ ಮುಂದಿನ 3 ದಿನಗಳ ಕಾಲ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಾಸನ, ಶಿವಮೊಗ್ಗ, ಮಡಿಕೇರಿ, ಬೆಳಗಾವಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಈ ಭಾಗಗಳಿಗೆ ಇನ್ನೂ 2 ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ವಿಜ್ಞಾನಿ ಡಾ.ಲತಾ ತಿಳಿಸಿದ್ದಾರೆ.
ಇನ್ನು ಈ ಭಾಗಗಳಲ್ಲಿ 3 ದಿನಗಳ ನಂತರ ಹಂತ-ಹAತವಾಗಿ ಮಳೆ ಕಡಿಮೆಯಾಗಲಿದ್ದು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಕಲಬುರಗಿ, ಯಾದಗಿರಿ ರಾಯಚೂರಿನಲ್ಲಿ ಮಳೆ ಪ್ರಮಾಣ ಕಡಿಮೆ ಇದೆ. ಇನ್ನೂ 10 ದಿನಗಳ ವರೆಗೂ ಮೋಡ ಮುಸುಕಿದ ವಾತಾವರಣ ಮುಂದುವರಿಯಲಿದೆ
