
ನಟ ಪ್ರಕಾಶ್ ರಾಜ್ ಗೆ ಬಿಗ್ ರಿಲೀಫ್: ಖುದ್ದು ಕೋರ್ಟ್‌ಗೆ ಹಾಜರಾಗಿ ಜಾಮೀನು ಪಡೆದ ನಟ!
ಬೆಂಗಳೂರು: ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ನ್ಯಾಯಾಲಯದಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೋರ್ಟ್ ನೀಡಿದ್ದ ವಾರೆಂಟ್ ಹಿನ್ನೆಲೆಯಲ್ಲಿ, ಇಂದು ಅವರು ಖುದ್ದು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದಿದ್ದಾರೆ.

ಕೋರ್ಟ್‌ಗೆ ಖುದ್ದಾಗಿ ಆಗಮಿಸಿದ ನಟ ಪ್ರಕಾಶ್ ರಾಜ್, ತಮಗೆ ಜಾರಿಯಾಗಿದ್ದ ವಾರೆಂಟ್ ಅನ್ನು ಹಿಂಪಡೆಯುವಂತೆ ತಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು, ವಾರೆಂಟ್ ರೆಕಾಲ್ ಮಾಡಿ ನಟನಿಗೆ ಜಾಮೀನು ಮಂಜೂರು ಮಾಡಿದ್ದಾರೆ.
ಕೋರ್ಟ್ ಪ್ರಕ್ರಿಯೆಗಳು ಮುಗಿಯುತ್ತಿದ್ದಂತೆ ನಟ ಪ್ರಕಾಶ್ ರಾಜ್ ಅವರು ಅಲ್ಲಿಂದ ನಿರ್ಗಮಿಸಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆಯಿಂದಾಗಿ ಕಳೆದ ಕೆಲವು ದಿನಗಳಿಂದ ಅವರ ಸುತ್ತ ಹರಿದಾಡುತ್ತಿದ್ದ ವಾರೆಂಟ್ ವಿವಾದಕ್ಕೆ ಸದ್ಯಕ್ಕೆ ಬ್ರೇಕ್ ಬಿದ್ದಂತಾಗಿದೆ.
