
ದಿಲ್ ದಾರ್ ಗೆ ಸಜ್ಜಾದ, ಪಡ್ಡೆಹುಲಿ ನಟ!
ಪಡ್ಡೆಹುಲಿ ಚಿತ್ರದಲ್ಲಿ ನಟಿಸಿದ್ದಖ್ಯಾತನಟ ಶ್ರೇಯಸ್ ಮಂಜು ನಾಯಕನಾಗಿ ನಟಿಸುತ್ತಿರುವ `ದಿಲ್ದಾರ್’ ಎಂಬ ಹೊಸ ಚಿತ್ರ ಮೆಚ್ಚುಗೆಗೆ ಕಾರಣವಾಗಿದೆ. ಈಗಾಗಲೇ ಮಾಸ್ ಪಾತ್ರಗಳ ಮೂಲಕ ಗಮನ ಸೆಳೆದಿರುವ ಶ್ರೇಯಸ್ ಮಂಜು, ಈ ಚಿತ್ರದಲ್ಲಿ ಮತ್ತೊಂದು ಹಂತದ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿರುವ ಸುಳಿವೊಂದು ಈ ಮೂಲಕ ಜಾಹೀರಾಗಿದೆ.ಮಧು ಗೌಡ ಗಂಗೂರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಫಸ್ಟ್ ಲುಕ್ ಟೀಸರ್ ಇದೀಗ ಬಿಡುಗಡೆಗೊಂಡಿದೆ.
ಏನ್ಸಿಯಂಟ್ ಮೂವೀಸ್ ಬ್ಯಾನರಿನಡಿಯಲ್ಲಿ ಆರ್. ಸಂತೋಷ್ ಕುಮಾರ್ ನಿರ್ಮಾಣ ಮಾಡಿರುವ ದಿಲ್ದಾರ್ಚಿತ್ರವೀಗ ಚಿತ್ರೀಕರಣವೆಲ್ಲ ಮುಗಿಸಿಕೊಂಡು ಬಿಡುಗಡೆಸಜ್ಜಾಗಿದೆ ಈ ಹಂತದಲ್ಲಿ ಫಸ್ಟ್ ಲುಕ್ ಟೀಸರ್ ಬಿಡುಗಡೆ ಆಗಿದ್ದದ್ದೂ ಪ್ರೇಕ್ಷಕರನ್ನು ತಲುಪಲು ಚಿತ್ರತಂಡ ಪ್ರಯತ್ನಿಸಿದೆ. ಈ ಹಿಂದೆಯೇ ಶ್ರೇಯಸ್ ಮಂಜು ಈ ಹಿಂದೆಂದೂ ಕಾಣಿಸಿಕೊಂಡಿರದ ಪಾತ್ರದಲ್ಲಿ ನಟಿಸಿದ್ದಾರೆಂದು ಚಿತ್ರತಂಡವು ತಿಳಿಸಿದೆ. ಅದರ ಚಹರೆ ಈ ಟೀಸರ್ ಮೂಲಕ ಅನಾವರಣಗೊಂಡಿದೆ.ಈ ಸಿನಿಮಾದ ಫಸ್ಟ್ ಲುಕ್ ಟೀಸರ್ ಇದೀಗ ಬಿಡುಗಡೆಗೊಂಡಿದೆ.
ಇದು ಭಿನ್ನವಾದೊಂದು ಪ್ರೇಮ ಕಥೆಯನ್ನು ಒಳಗೊಂಡಿರುವ ಪಕ್ಕಾ ಆಕ್ಷನ್ ಚಿತ್ರವೆಂಬ ಬಗ್ಗೆ ಚಿತ್ರತಂಡದವರು ತಿಳಿಸಿದ್ದಾರೆ. ನಟ ಶರಣ್ ಅವರ ತಂಗಿ ಮಗಳಾದ ಕೀರ್ತಿ ಕೃಷ್ಣ ಈ ಚಿತ್ರದ ಮೂಲಕವೇ ಮೊದಲಬಾರಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಸಾಧು ಕೋಕಿಲಾ, ಚಂದ್ರಪ್ರಭ, ಕಾರ್ತಿಕ್, ಚಿಲ್ಲರ್ ಮಂಜು ಮುಂತಾದ ಹಾಸ್ಯ ನಟರು ಈ ಚಿತ್ರದಲ್ಲಿ ಮುಖ್ಯಪಾತ್ರವಹಿಸಿದ್ದಾರೆ. ಕೆಜಿಎಫ್ ಖ್ಯಾತಿಯ ಆಂಡ್ರೋ ಅವಿನಾಶ್, ಭಜರಂಗಿ ಲೋಕಿ, ಅರ್ಪಿತ್ ಖಳನಟರಾಗಿ ನಟಿಸಿದ್ದಾರೆ. ಹರೇಕೃಷ್ಣ ರೆಡ್ಡಿ ಎಸ್ ಕಾರ್ಯಕಾರಿ ನಿರ್ಮಾಪಕರಾಗಿ ಜೊತೆಯಾಗಿದ್ದಾರೆ. ದಿಲ್ ದಾರ್ ಚಿತ್ರ ಕುರಿತಾದ ಮತ್ತಷ್ಟು ಮಾಹಿತಿಗಳು ಶೀಘ್ರದಲ್ಲಿಯೇ ಪ್ರೇಕ್ಷಕರನ್ನು ತಲುಪಲಿವೆ.
