LatestTop Storiesಬೆಂಗಳೂರು-Bengaluru

ರೇವಣ್ಣ ಸಲಹೆಯಂತೆ ಅಜ್ಜಿಯ ಅಂತ್ಯಸಂಸ್ಕಾರಕ್ಕೆ ಪೆರೋಲ್ ಸಲ್ಲಿಸದ ಪ್ರಜ್ವಲ್..!

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಒಳಗಿರುವುದರಿಂದ, ಈ ಸಂದರ್ಭದಲ್ಲಿ ಹೊರಬಂದರೆ ಕುಟುಂಬಕ್ಕೆ ಹಾಗೂ ಸಾರ್ವಜನಿಕವಾಗಿ ಇರಿಸುಮುರಿಸು ಉಂಟಾಗಬಹುದು. ಆದ್ದರಿಂದ ಯಾವುದೇ ಕಾರಣಕ್ಕೂ ಪೆರೋಲ್‌ಗೆ ಅರ್ಜಿ ಸಲ್ಲಿಸದಂತೆ ತಂದೆ ಹೆಚ್.ಡಿ. ರೇವಣ್ಣ ನೀಡಿದ ಸಲಹೆಯಂತೆ ಪ್ರಜ್ವಲ್ ಅರ್ಜಿ ಹಾಕಿಲ್ಲ.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ ಜೈಲಿನಲ್ಲಿರುವ ಮೊಮ್ಮಗ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣಅಜ್ಜಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪೆರೋಲ್ ಕೋರಿ ಯಾವುದೇ ಅರ್ಜಿ ಸಲ್ಲಿಸಿಲ್ಲ.

ಪ್ರಜ್ವಲ್ ರೇವಣ್ಣ ಇದುವರೆಗೆ ಪೆರೋಲ್ ಅಥವಾ ತಾತ್ಕಾಲಿಕ ಜಮೀನಿಗಾಗಿ ಯಾವುದೇ ಮನವಿ ಸಲ್ಲಿಸಿಲ್ಲ ಎಂದು ಪರಪ್ಪನ ಅಗ್ರಹಾರ ಜೈಲು ಮುಖ್ಯ ಅಧೀಕ್ಷಕ (SP) ಅಂಶುಕುಮಾರ್ ಸ್ಪಷ್ಟಮಾಹಿತಿ ನೀಡಿದ್ದಾರೆ.

ಅಂತ್ಯಕ್ರಿಯೆಯ ಸ್ಥಳಕ್ಕೆ ತೆರಳಲು ಅವಕಾಶವಿಲ್ಲದ ಕಾರಣ ಮಾನವೀಯತೆಯ ಆಧಾರದ ಮೇಲೆ ತಮ್ಮ ಸೆಲ್‌ನಲ್ಲಿರುವ ಟಿವಿ ಅಥವಾ ಜೈಲು ಆಡಳಿತ ಒದಗಿಸುವ ವೀಡಿಯೊ ಕಾನ್ಫರೆನ್ಸ್ (Video Conference) ವ್ಯವಸ್ಥೆಯ ಮೂಲಕ ಅಂತ್ಯಕ್ರಿಯೆಯ ನೇರ ಪ್ರಸಾರವನ್ನು ವೀಕ್ಷಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಇದುವರೆಗೆ ಪೆರೋಲ್ ಅಥವಾ ತಾತ್ಕಾಲಿಕ ಜಮೀನಿಗಾಗಿ ಯಾವುದೇ ಮನವಿ ಸಲ್ಲಿಸಿಲ್ಲ ಎಂದು ಪರಪ್ಪನ ಅಗ್ರಹಾರ ಜೈಲು ಮುಖ್ಯ ಅಧೀಕ್ಷಕ (SP) ಅಂಶುಕುಮಾರ್ ಸ್ಪಷ್ಟಮಾಹಿತಿ ನೀಡಿದ್ದಾರೆ.

Share with Friends
author avatar
Digital Desk