
ರಣಾರಂಗವಾದ ಜಂತರ್ ಮಂತರ್..ಕಾಕ್ರೋಚ್ ಗೆ ಲಾಠಿ ಏಟು
ನವದೆಹಲಿ, ಜು. 20: ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ನಡೆಸುತ್ತಿರುವ ಸಂಸತ್ ಚಲೋ ಪ್ರತಿಭಟನಾ ರ‍್ಯಾಲಿ ವೇಳೆ ಭಾರೀ ಉದ್ವಿಗ್ನತೆ ಉಂಟಾಗಿದ್ದು, ಪಕ್ಷದ ಸಂಸ್ಥಾಪಕ ಅಭಿಜಿತ್ ದೀಪ್ಕೆಯವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂಸತ್ ಮುತ್ತಿಗೆಗೆ ಯತ್ನಿಸಿದ ಸಿಜೆಪಿ ಸದಸ್ಯರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದು,ಜೊತೆಗೆ ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಸಿಡಿಸಿದ್ದಾರೆ. ಇದರಿಂದ ದೆಹಲಿಯಲ್ಲಿ ಭಾರೀ ಉದ್ವಿಗ್ನತೆ ಉಂಟಾಗಿದೆ. ಲಾಠಿಚಾರ್ಜ್ ಬೆನ್ನಲ್ಲೇ ದೆಹಲಿಯ ಕೆಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಸ್ಥಗಿತಗೊಂಡಿದೆ.ಜೊತೆಗೆ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಉದ್ವಿಗ್ನಗೊಂಡಿದ್ದು, ಘರ್ಷಣೆಯಲ್ಲಿ ಕೆಲ ಪೊಲೀಸರು ಹಾಗೂ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ದೆಹಲಿಯ ಜಂತರ್ ಮಂತರ್‌ನಲ್ಲಿಂದು ಹೈ ಡ್ರಾಮಾವೇ ನಡೆದಿದ್ದು, ಕೆಲ ದಿನಗಳಿಂದ ನೀಟ್ ಅಕ್ರಮ ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇದ್ರ ಪ್ರದಾನ್ ರಾಜೀನಾಮೆ ನೀಡುವಂತೆ ಆಗ್ರಹಿಸಿ ಕಾಕ್ರೋಚ್ ಜನತಾಪಕ್ಷದ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಪೊಲೀಸರ ಭದ್ರ ಕೋಟೆಯನ್ನು ಮುರಿದು, ಬ್ಯಾರಿಕೇಡ್‌ಗಳನ್ನು ತಳ್ಳಿ ಮೆರವಣಿಗೆ ಮೂಲಕ ತೆರಳಲು ಮುಂದಾದಾಗ ದೆಹಲಿ ಪೊಲೀಸರು ಮತ್ತು ಆರ್‌ಪಿಎಫ್ ಪೊಲೀಸರು ಲಾಠಿ ಬೀಸಿ ಪ್ರತಿಭಟನಾಕಾರರನ್ನು ಚದುರಿಸಿದರು. ಅಲ್ಲದೆ,ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಸಿಡಿಸಿ ಪರಿಸ್ಥಿತಿ ಹತೋಟಿ ತರಲು ಪ್ರಯತ್ನ ನಡೆಸಿದರು.

ಇನ್ನು ಪ್ರತಿಭಟನೆಗೆ ಭಾರಿ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಜಮಾವಣೆಗೊಂಡಿದ್ದು, ಯಾವುದೇ ಅಹಿತಕರ ಘಟನೆಗಳಾಗದಂತೆ ಪೊಲೀಸರು ಬಿಗಿ ಭದ್ರತೆಯನ್ನು ಕೈಗೊಂಡಿದ್ದರಾದರೂ ಅದನ್ನು ಲೆಕ್ಕಿಸದೆ ವಿದ್ಯಾರ್ಥಿಗಳು ಸಂಸತ್ ಭವನ ಚಲೋ ನಡೆಸಲು ಮುಂದಾದರು. ಇದರಿಂದ ಘರ್ಷಣೆಯ ವಾತಾವರಣ ರೂಪುಗೊಂಡು ಪೊಲೀಸರು ಲಾಠಿ ಪ್ರಹಾರ ನಡೆಸಬೇಕಾಯಿತು.
ಕಾಕ್ರೋಚ್ ಜನತಾಪಕ್ಷದ ಸಂಸತ್ ಚಲೋ ಹಿನ್ನೆಲೆಯಲ್ಲಿ ಸಂಸತ್‌ನ ಸುತ್ತ ಭದ್ರತೆಯನ್ನು ಮತ್ತಷ್ಟು ಬಿಗಿ ಗೊಳಿಸಲಾಗಿದ್ದು, ಬಿಎನ್‌ಎಸ್ ಸೆಕ್ಷನ್ ೧೬೩ರಡಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು.
ಪ್ರತಿಭಟನಾ ಮೆರವಣಿಗೆ ಹಿನ್ನೆಲೆಯಲ್ಲಿ ಭದ್ರತಾ ಕಾರ್ಯಗಳಿಗ ದೆಹಲಿ ಮೆಟ್ರೋ ರೈಲು ನಿಗಮವು ಇಂದು ರಾಜೀವ್ ಚೌಕ್ ಜನಪತ್ ಪಟೇಲ್ ಚೌಕ್ ಸೆಂಟ್ರೆಲ್ ಸೇಕ್ರೇಟಿ ಯೇಟ್ ಮತ್ತು ಸೇವಾ ತೀರ್ಥ ಸೇರಿದಂತೆ ಐದು ನಿಲ್ದಾಣಗಳನ್ನು ಮುಚ್ಚಿದೆ. ಮುಂದಿನ ಸೂಚನೆವರೆಗೆ ಈ ಐದು ನಿಲ್ದಾಗಳು ಮುಚ್ಚಲ್ಪಟ್ಟಿರುವತ್ತೆ ಎಂದು ದಹೆಲಿ ಮೆಟ್ರೋ ನಿಗಮ ತಿಳಿಸಿದೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪದ್ರಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾಪಕ್ಷದ ಪರವಾಗಿ ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ್ದ ಸಾಮಾಜಿಕ ಹೋರಾಟಗಾರ ಸೋನಂ ವಾಂಚುಕ್ ಅವರನ್ನು ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸರು ಆಸ್ಪತ್ರೆಗೆ ದಾಖಲು ಮಾಡಿದ್ದರು. ಇದಾದ ಬಳಿಕ ಕಾಕ್ರೋಚ್ ಜನತಾಪಕ್ಷದ ಸಂಸ್ಥಾಪಕ ಅಭಿಜಿತ್ ದೀಬ್ಕೆ ನಿರಶನ ಆರಂಭಿಸಿ ಇಂದು ಸಂಸತ್ ವರೆಗೆ ಪ್ರತಿಭಟನೆ ಮೆವರಣಿಗೆ ನಡೆಸುವುದಾಗಿ ಹೇಳಿದ್ದರು. ಅದರಂತೆ ಕಾಕ್ರೋಚ್ ಜನತಾಪಕ್ಷದ ಕಾರ್ಯಕರ್ತರು ಮೆರವಣಿಗೆಗೆ ಮುಂದಾದಾಗ ಪೊಲೀಸರು ಲಾಠಿ ಪ್ರಹಾರ ನಡೆಸಿ ಸಂಸತ್ ಭವನ ಚಲೋವನ್ನು ವಿಫಲಗೊಳಿಸಿದ್ದಾರೆ.
ಈ ಎಲ್ಲ ಬೆಳವಣಿಗೆಗಳ ನಡುವೆಯೇ ನಿರಶನ ಅಂತ್ಯಗೊಳಿಸಲು ಸೋನಂ ವಾಂಚುಕ್ ಮೂರು ಷರತ್ತುಗಳನ್ನು ಒಳಗೊಂಡ ಪತ್ರವನ್ನು ಸರ್ಕಾರಕ್ಕೆ ಬರೆದಿದ್ದಾರೆ.
ಈ ಪತ್ರದ ಪ್ರಕಾರ ಪ್ರಶ್ನೆ ಪತ್ರಿಕೆ ಸೋರಿಕೆಯ ವೈಫಲ್ಯದ ಹೊಣೆಯನ್ನು ಕೇಂದ್ರ ಸರ್ಕಾರ ಹೊರಬೇಕು. ಸಂಸತ್‌ನಲ್ಲಿ ಕಾಕ್ರೋಚ್ ಜನತಾ ಪಕ್ಷದ ಬೇಡಿಕೆಗಳನ್ನು ಚರ್ಚೆಗೆ ತೆಗೆದುಕೊಳ್ಳಲು ಸಂಸತ್ ಸದಸ್ಯರು ಒಪ್ಪಿಕೊಳ್ಳಬೇಕು ಎಂಬ ಎರಡನೇ ಷರತ್ತನ್ನು ಇಟ್ಟು, ಸಂಸತ್‌ನವರೆಗೆ ಈ ಷರತ್ತುಗಳನ್ನು ಒಪ್ಪಿಕೊಂಡ ಬಗ್ಗೆ ಭರವಸೆ ನೀಡಲು ಸಂಸದರು ಸಫ್ದರ್ ಜಂಗ್ ಆಸ್ಪತ್ರೆಗೆ ಬರಬೇಕು ಮೂರನೇ ಷರತ್ತನ್ನು ವಿಧಿಸಿದ್ದರು.
