Latestಬೆಳಗಾವಿ-Belagavi

ಸಚಿವ ಸಂಪುಟ ವಿಸ್ತರಣೆ ಹೈಕಮಾಂಡ್ ನಿರ್ಧಾರವೇ ಅಂತಿಮ – ಸತೀಶ್ ಜಾರಕಿಹೊಳಿ ..!

ಬೆಳಗಾವಿ: “ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ. ಬೆಳಗಾವಿ ಜಿಲ್ಲೆಗೆ ಇನ್ನೂ ಒಂದು ಸಚಿವ ಸ್ಥಾನ ಸಿಗುವ ಸಂಪೂರ್ಣ ವಿಶ್ವಾಸವಿದೆ” ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
​ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ, ಡ್ರಗ್ಸ್ ಹಾವಳಿ, ನೀಟ್ (NEET) ಅಕ್ರಮ ಹಾಗೂ ರಾಜ್ಯದ ಬರ ಪರಿಸ್ಥಿತಿ ಕುರಿತು ಹಲವು ಮಹತ್ವದ ವಿಷಯಗಳನ್ನು ಹಂಚಿಕೊಂಡರು.

ಡ್ರಗ್ಸ್ ಹಾವಳಿ ತಡೆಗಟ್ಟಲು ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗದೆ, ಗ್ರಾಮೀಣ ಭಾಗಗಳಲ್ಲೂ ವ್ಯಾಪಕ ಜಾಗೃತಿ ಅಭಿಯಾನ ನಡೆಸಲಾಗುವುದು. ವ್ಯಸನಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ.
ದೆಹಲಿಯಲ್ಲಿ ನೀಟ್ ಅಕ್ರಮ ಪ್ರಕರಣದ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಕೇಂದ್ರ ಸರ್ಕಾರ ತಕ್ಷಣವೇ ಸ್ಪಂದಿಸಬೇಕು. ಇದನ್ನು ರಾಜಕೀಯ ಪ್ರತಿಭಟನೆಯಾಗಿ ನೋಡದೆ, ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕು.
​ಬರ ಪರಿಸ್ಥಿತಿ ಸಮೀಕ್ಷೆ: ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ಕುರಿತು ಸಮಗ್ರ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ. ವರದಿ ಕೈಸೇರಿದ ತಕ್ಷಣ ಅದನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಪರಿಹಾರ ಕೋರಲಾಗುವುದು.

Share with Friends
author avatar
Digital Desk