ಯಾದಗಿರಿವಿಜಯಪುರ-Vijayapura

ಆಲಮಟ್ಟಿ ಜಲಾಶಯ ಭರ್ತಿ, ರೈತರ ಮೊಗದಲ್ಲಿ ಮಂದಹಾಸ!

​ವಿಜಯಪುರ/ಯಾದಗಿರಿ: ರಾಜ್ಯಾದ್ಯಂತ ಮುಂಗಾರು ಮಳೆ ಬಿರುಸುಗೊಂಡಿದ್ದು, ಕೃಷ್ಣಾ ನದಿಯ ಜಲಾನಯನ ಪ್ರದೇಶದಲ್ಲಿ ಧಾರೆಕಾರ ಮಳೆಯಾಗುತ್ತಿದೆ. ಇದರಿಂದಾಗಿ ಕೃಷ್ಣಾ ನದಿಗೆ ಒಳ ಹರಿವು ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಪ್ರಸಿದ್ಧ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.


​ಜಲಾಶಯದ ಸುರಕ್ಷತೆ ಹಾಗೂ ನೀರಿನ ಮಟ್ಟವನ್ನು ಕಾಯ್ದುಕೊಳ್ಳುವ ಹಿತದೃಷ್ಟಿಯಿಂದ, ಕೆಳಭಾಗದಲ್ಲಿರುವ ನಾರಾಯಣಪುರ ಜಲಾಶಯಕ್ಕೆ ಬರೋಬ್ಬರಿ 67,500 ಕ್ಯೂಸೆಕ್‌ ನೀರನ್ನು ಬಿಡುಗಡೆ ಮಾಡಲಾಗಿದೆ.

ಆಲಮಟ್ಟಿ ಜಲಾಶಯ ಭರ್ತಿ ರೈತರ ಮೊಗದಲ್ಲಿ ಮಂದಹಾಸ

ಗರಿಷ್ಠ ಮಟ್ಟ ತಲುಪಿ ಸಂಪೂರ್ಣ ಭರ್ತಿಯಾಗಿದೆ. ಸದ್ಯ 12.786 TMC ನೀರು ಸಂಗ್ರಹಗೊಂಡಿದ್ದು, ಒಳಹರಿವು ಮುಂದುವರಿದಿದೆ.ಕಳೆದ ಕೆಲವು ದಿನಗಳಿಂದ ಮಳೆಯಿಲ್ಲದೆ ಕಂಗಾಲಾಗಿದ್ದ ಉತ್ತರ ಕರ್ನಾಟಕದ ಭಾಗದಲ್ಲಿ ಜಲಾಶಯಗಳು ಭರ್ತಿಯಾಗಿರುವುದು.

ಮತ್ತು ನದಿಯಲ್ಲಿ ನೀರಿನ ಹರಿವು ಗಣನೀಯವಾಗಿ ಹೆಚ್ಚಿರುವುದು ಕೃಷಿ ಚಟುವಟಿಕೆಗಳಿಗೆ ಹೊಸ ಚೈತನ್ಯ ತಂದಿದೆ. ಹೊಲ-ಗದ್ದೆಗಳಲ್ಲಿ ಬಿತ್ತನೆ ಹಾಗೂ ಕೃಷಿ ಕೆಲಸಗಳು ಭರದಿಂದ ಸಾಗುತ್ತಿದ್ದು, ಜಲಾಶಯಗಳು ಭರ್ತಿಯಾದ ಹಿನ್ನೆಲೆಯಲ್ಲಿ ಈ ಭಾಗದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

Share with Friends
author avatar
Digital Desk