ರಾಜಕೀಯ | Politicsರಾಜ್ಯ-Karnataka

ಧರ್ಮೇಂದ್ರ ಪ್ರಧಾನ್ ಅವರನ್ನು ಇನ್ನೂ ವಜಾ ಮಾಡಿಲ್ಲ ಏಕೆ..? : ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕಲಬುರಗಿ, ಜು. 24: ನೀಟ್ ಹಾಗೂ ಸಿಬಿಎಸ್‌ಇ ಪರೀಕ್ಷಾ ಅಕ್ರಮ ಪ್ರಕರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ತಡವಾಗಿ ಪ್ರತಿಕ್ರಿಯೆ ನೀಡಿದ್ದು, ಇಷ್ಟು ದಿನ ಮೌನವಾಗಿದ್ದೇಕೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಹಲವಾರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಬಳಿಕ ಈಗ ಮಾತನಾಡಿರುವುದು ಸಮಂಜಸವಲ್ಲ ಎಂದು ಅವರು ಟೀಕಿಸಿದರು.

ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವ ಬದಲು ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ ಎಂದು ಆರೋಪಿಸಿದ ಖರ್ಗೆ, “ಇಂತಹ ಅಸಮರ್ಥ ಸಚಿವರು ಸಚಿವ ಸಂಪುಟದಲ್ಲಿ ಇರಬಾರದು ಎಂದು ಪ್ರಧಾನಿ ಹೇಳಬೇಕಾಗಿತ್ತು. ಆದರೆ ಸರ್ಕಾರವೇ ಅವರನ್ನು ಸಮರ್ಥಿಸಿಕೊಳ್ಳುತ್ತಿದೆ” ಎಂದು ಹೇಳಿದರು.

ಕಳೆದ 10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿದ್ದು, ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಎಂದು ಆರೋಪಿಸಿದ ಅವರು, ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಧರ್ಮೇಂದ್ರ ಪ್ರಧಾನ್ ಅವರ ರಾಜಕೀಯ ಭವಿಷ್ಯವೇ ಕೇಂದ್ರ ಸರ್ಕಾರಕ್ಕೆ ಮುಖ್ಯವಾಗಿದೆ ಎಂದು ಟೀಕಿಸಿದರು.

ಕಾಂಗ್ರೆಸ್ ಪ್ರತಿಭಟನೆ ನಡೆಸಿದಾಗ ಬಿಜೆಪಿ ಕಾಂಗ್ರೆಸ್ ವಿರುದ್ಧವೇ ಪ್ರತಿಭಟನೆ ನಡೆಸುತ್ತಿದೆ. ಇದು ಯಾವ ರೀತಿಯ ವ್ಯವಸ್ಥೆ ಎಂದು ಪ್ರಶ್ನಿಸಿದ ಖರ್ಗೆ, ಧರ್ಮೇಂದ್ರ ಪ್ರಧಾನ್ ಅವರಿಗೆ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಬೆಂಬಲದ ಕಾರಣದಿಂದ ರಕ್ಷಣೆ ನೀಡಲಾಗುತ್ತಿದೆ ಎಂದು ಆರೋಪಿಸಿದರು.

Share with Friends
author avatar
News Desk