Latestರಾಜ್ಯ-Karnatakaರಾಷ್ಟ್ರೀಯ-National

NEET ಅಕ್ರಮ ಖಂಡಿಸಿ ಚನ್ನಗಿರಿಯಲ್ಲಿ ಬೃಹತ್ ಪ್ರತಿಭಟನೆ..!

ಚನ್ನಗಿರಿ: ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (NEET) ಯಲ್ಲಿ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿವಿಧ ಅಕ್ರಮಗಳನ್ನು ಖಂಡಿಸಿ, ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಚನ್ನಗಿರಿ ಯೂತ್ ಕಾಂಗ್ರೆಸ್, NSUI, AITUC ಹಾಗೂ ತಾಲ್ಲೂಕು ಕಟ್ಟಡ ಕಾರ್ಮಿಕರ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

​ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು. ಬಳಿಕ ತಾಲ್ಲೂಕು ಕಚೇರಿಗೆ ತೆರಳಿ ತಹಶೀಲ್ದಾರ್ ಎನ್.ಜೆ. ನಾಗರಾಜ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ರವಾನಿಸಿದರು.

NEET ಅಕ್ರಮ ಖಂಡಿಸಿ ಚನ್ನಗಿರಿಯಲ್ಲಿ ಬೃಹತ್ ಪ್ರತಿಭಟನೆ

NEET ಅಕ್ರಮಗಳಿಂದಾಗಿ ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದೆ. ಆದ್ದರಿಂದ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಈ ಅನ್ಯಾಯಕ್ಕೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣ ರಾಜೀನಾಮೆ ನೀಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

​ಪ್ರತಿಭಟನೆಯಲ್ಲಿ ಚನ್ನಗಿರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಅನಾಸ್ ಅಲಿ ಖಾನ್, ಪುರಸಭೆಯ ಮಾಜಿ ಸದಸ್ಯ ಗೌಸ್ ಪೀರ್, ಮುಖಂಡರಾದ ಮಧು, ವಿಜಯ್ ಗೌಡ, ಸಂತೆಬೆನ್ನೂರು ಗಿರೀಶ್, ಹಲಕನಾಳ್ ರಾಕೇಶ್, ಶಂಕರಿಪುರ ರುದ್ರೇಶ್, ಕುಶಲ್, ಜಯದೇವ್, ಮಧುಕುಮಾರ್, ತನ್ವೀರ್ ಶೇಟ್, ವಾಷೀಮ್ ಸೇರಿದಂತೆ AITUC ಮತ್ತು ಕಟ್ಟಡ ಕಾರ್ಮಿಕರ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದ್ದರು.

Share with Friends
author avatar
Digital Desk