Latestಕಲಬುರಗಿ-Kalaburagi

ಯಡ್ರಾಮಿಯ ಬಿಳವಾರ ದೇವಸ್ಥಾನದಲ್ಲಿ ತಡರಾತ್ರಿ ಭಾರಿ ಕಳ್ಳತನ..!

ಕಲಬುರಗಿ: ಜಿಲ್ಲೆಯ ಯಡ್ರಾಮಿ ತಾಲೂಕಿನಲ್ಲಿ ತಡರಾತ್ರಿ ಭಾರಿ ಕಳ್ಳತನ ಸಂಭವಿಸಿದ್ದು, ದೇವಸ್ಥಾನಕ್ಕೆ ಕನ್ನ ಹಾಕಿದ ಖದೀಮರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.


​ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದ ಶ್ರೀ ಗ್ರಾಮ ದೇವತೆ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ತಡರಾತ್ರಿ ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ದೇವಿಯ ಮೂರ್ತಿಯ ಮೇಲಿದ್ದ 5 ತೋಲಾ ಬಂಗಾರ ಹಾಗೂ 40 ತೋಲಾ ಬೆಳ್ಳಿ ಆಭರಣಗಳನ್ನು ಕದ್ದೊಯ್ದಿದ್ದಾರೆ.


​ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಯಡ್ರಾಮಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಕಳ್ಳರ ಪತ್ತೆಗೆ ಜಾಲ ಬೀಸಿದ್ದಾರೆ.

Share with Friends
author avatar
Digital Desk