LatestTop Storiesಬೆಳಗಾವಿ-Belagaviರಾಜಕೀಯ | Politics

ಸಿದ್ದರಾಮಯ್ಯ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯಲ್ಲ

ಬೆಳಗಾವಿ,ಜು.28: ಮಾಜಿ ಸಿಎಂ ಸಿದ್ದರಾಮಯ್ಯ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾತ್ರ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವ ಯಾವುದೇ ಉದ್ದೇಶವನ್ನು ವ್ಯಕ್ತಪಡಿಸಿಲ್ಲ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ತಂದೆ ಸಿದ್ದರಾಮಯ್ಯ ದುರ್ಬಲರು, ಶೋಷಿತರು ಮತ್ತು ಸಮಾಜದ ಹಿಂದುಳಿದ ವರ್ಗಗಳ ಪರವಾಗಿ ಧ್ವನಿ ಎತ್ತುವ ಕೆಲಸ ಮುಂದುವರಿಸುತ್ತೇನೆ ಎಂದಿದ್ದಾರೆ.ಹಿಂದೆಲ್ಲಾ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.ಹಾಗಾಗಿ ಅವರು ಮೊನ್ನೆ ಹೇಳಿದ್ದರಲ್ಲಿ ಹೊಸದೇನೂ ಇಲ್ಲ ಎಂದು ತಿಳಿಸಿದರು.

ಅಲ್ಲದೆ,ಮುಂದಿನ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಪಕ್ಷದ ಪರವಾಗಿ ರಾಜ್ಯಾದ್ಯಂತ ಪ್ರಚಾರ ನಡೆಸುವುದು ಖಚಿತ ಎಂದ ಯತೀಂದ್ರ, ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವ ಯಾವುದೇ ಉದ್ದೇಶವನ್ನು ತಮ್ಮ ತಂದೆ ವ್ಯಕ್ತಪಡಿಸಿಲ್ಲ ಎಂದು ಹೇಳಿದರು.

ಅವರ ರಾಜಕೀಯ ಹೋರಾಟ ಮುಂದುವರಿಯಲಿದೆ. ಮುಖ್ಯವಾಗಿ ದುರ್ಬಲರು, ಶೋಷಿತರು ಮತ್ತು ಸಮಾಜದ ಹಿಂದುಳಿದ ವರ್ಗಗಳ ಪರವಾಗಿ ಧ್ವನಿ ಎತ್ತುವ ಕೆಲಸವನ್ನು ಮುಂದುವರಿಸುತ್ತೇನೆ ಎಂದು ಸ್ಪಷ್ಟವಾಗಿ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ ಎಂದರು.

ಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನ ಹೈಕಮಾಂಡ್ ನಾಯಕರು ದೆಹಲಿಗೆ ಕರೆಸಿಕೊಂಡಿದ್ದಾರೆ. ಸಂಪುಟ ವಿಸ್ತರಣೆ ಸಂಬAಧ ಚರ್ಚೆಯ ಬಳಿಕ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಸಂಪುಟ ವಿಸ್ತರಣೆ ಅಥವಾ ಪುನರ್‌ರಚನೆ ಕುರಿತ ಅಂತಿಮ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಚರ್ಚಿಸಿ ಕೈಗೊಳ್ಳಲಿದ್ದಾರೆ. ಅದರ ನಂತರವೇ ಸಚಿವ ಸಂಪುಟ ವಿಸ್ತರಣೆಯ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದರು.

Share with Friends
author avatar
Digital Desk