Latestಬಾಗಲಕೋಟೆ

ಜೀವನಾಡಿಯಾಗಿದ್ದ ಕೆಂದೂರು ಕೆರೆ ಹಾಳು: ಒತ್ತುವರಿ-ಅಕ್ರಮದ ಬಗ್ಗೆ ತನಿಖೆ ಮಾಡಿ ಎಂದ ರೈತರು..!

ಬಾಗಲಕೋಟೆ: ಐತಿಹಾಸಿಕ ಪ್ರವಾಸಿ ತಾಣವಾಗಿರುವ ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದ ಅಗಸ್ತ್ಯ ತೀರ್ಥ ಹೊಂಡದಲ್ಲಿ ಸಾವಿರಾರು ಮೀನುಗಳು ಸಾವನ್ನಪ್ಪಿರುವ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ತೀರ್ಥದ ದಡದ ಬಳಿ ಸತ್ತ ಮೀನುಗಳು ತೇಲುತ್ತಿರುವ ದೃಶ್ಯಗಳು ಮನಕಲಕುವಂತಿವೆ. ಸಮಯ ಕಳೆದಂತೆ ಸತ್ತ ಮೀನುಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಸ್ಥಳೀಯರ ಕಳವಳಕ್ಕೆ ಕಾರಣವಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧಿಕಾರಿಗಳ ಪ್ರಾಥಮಿಕ ಮಾಹಿತಿ ಪ್ರಕಾರ, ನೀರಿನಲ್ಲಿ ಕರಗಿರುವ ಆಮ್ಲಜನಕದ ಪ್ರಮಾಣ (Dissolved Oxygen) ಕಡಿಮೆಯಾಗಿರುವುದು ಹಾಗೂ ನೀರು ಕಲುಷಿತಗೊಂಡಿರುವುದರಿಂದ ಮೀನುಗಳು ಸಾವನ್ನಪ್ಪಿವೆ ಎಂದು ತಿಳಿಸಿದ್ದಾರೆ.

ಜೀವನಾಡಿಯಾಗಿದ್ದ ಕೆಂದೂರು ಕೆರೆ ಹಾಳು ಒತ್ತುವರಿ ಅಕ್ರಮದ ಬಗ್ಗೆ ತನಿಖೆ ಮಾಡಿ ಎಂದ ರೈತರು

ಸದ್ಯ ನೀರಿನ ಮಾದರಿಗಳನ್ನು ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಐತಿಹಾಸಿಕ ಮಹತ್ವ ಹೊಂದಿರುವ ಅಗಸ್ತ್ಯ ತೀರ್ಥದಲ್ಲಿ ಈ ರೀತಿಯ ಘಟನೆ ನಡೆದಿರುವುದು ಪರಿಸರ ಪ್ರೇಮಿಗಳು ಹಾಗೂ ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ತೀರ್ಥದ ನೀರಿನ ಗುಣಮಟ್ಟ ಕಾಪಾಡಲು ಶಾಶ್ವತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Share with Friends
author avatar
Digital Desk